ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ ಹಿನ್ನಲೆಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಖಾಯಂ ಸಿಬ್ಬಂದಿಯಾದ 36 ಜನ ಅಡುಗೆದಾರರನ್ನು ಹಾಗೂ 19 ಜನ ವಾರ್ಡಗಳನ್ನು ನಿಯೋಜನೆ ಮಾಡಲಾಗಿದೆ.
ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ, ಕುಡಿಯುವ ನೀರು, ಬಳಕೆ ನೀರು, ಊಟ ಮತ್ತು ಉಪಹಾರ, ಸ್ನಾನಗೃಹಗಳು ಹಾಗೂ ಶೌಚಾಲಯಗಳು, ವಸತಿ ನಿಲಯದ ಒಳ ಮತ್ತು ಹೊರಾಂಗಣವನ್ನು ಸ್ವಚ್ಛವಾಗಿಟ್ಟುಕೊಂಡು ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ನಿಯೋಜನೆಗೊಂಡ ಸಿಬ್ಬಂದಿಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಿಯೋಜನೆಗೊಂಡ ಸಿಬ್ಬಂದಿಯು ಕಡ್ಡಾಯವಾಗಿ ಆಗಸ್ಟ್ 08 ರಿಂದ ಪ್ರತಿದಿನ ಬೆಳಗ್ಗೆ 6 ಗಂಟೆಗೆ ನಿಯೋಜಿಸಿದ ಸ್ಥಳದಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ ತಮಗೆ ವಹಿಸಿದ ಕರ್ತವ್ಯವನ್ನು ಶಿಸ್ತಿನಿಂದ ಹಾಗೂ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲಗಳು ಆಗದಂತೆ ರ‍್ಯಾಲಿಯನ್ನು ಯಶಗೊಳಿಸಲು ಸೂಚಿಸಿದೆ.
ಈ ಕರ್ತವ್ಯಕ್ಕೆ ಗೈರು ಹಾಜರಾದ ಹಾಗೂ ಕರ್ತವ್ಯ ಲೋಪವೆಸಗಿದ ಸಿಬ್ಬಂದಿಯ ವಿರುದ್ದ ನಿಯಮಾನುಸಾರ ಶಿಸ್ತು ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ವಲಯ ಕಚೇರಿ ಜಿಲ್ಲಾ ಬಂಜಾರ ಭವನ ಮಂತ್ರಾಲಯ ರೋಡ್ ರಾಯಚೂರ ಇಲ್ಲಿಗೆ 10 ಜನ ಅಡುಗೆದಾರರನ್ನು ಕರ್ತವ್ಯಕ್ಕೆ ಮತ್ತು 10 ಜನ ವಾರ್ಡಗಳನ್ನು ಮೇಲುಸ್ತುವಾರಿಗಳನ್ನಾಗಿ ನಿಯೋಜಿಸಲಾಗಿದೆ.
ಅದೇ ರೀತಿ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ ವಲಯ ಕಚೇರಿ ಜಿಲ್ಲಾ ಬಂಜಾರ ಭವನ ಮಂತ್ರಾಲಯ ರೋಡ್ ರಾಯಚೂರ ಇಲ್ಲಿಗೆ 26 ಜನ ಅಡುಗೆದಾರರನ್ನು ಕರ್ತವ್ಯಕ್ಕೆ ಮತ್ತು 9 ಜನ ವಾರ್ಡಗಳನ್ನು ಮೇಲುಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ…