|

ಸೇವಾ ಭದ್ರತೆ ಮತ್ತು ಕನಿಷ್ಠ ವೇತನ ಕಲ್ಪಿಸಿ: ಹೊರ ಗುತ್ತಿಗೆ ನೌಕರರ ಸಂಘ ಪ್ರತಿಭಟನೆ

ಚಿತ್ರದುರ್ಗ.10.ಸೆಪ್ಟೆಂಬರ್.25:- ರಾಜ್ಯ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಸ್ತಿರುವ ಹೊರಗುತ್ತಿಗೆ ನೌಕರರ ತಿಂಗಳಿಗೆ ಕನಿಷ್ಠ ₹36,000 ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನಕಾರರು ಜಮಾಯಿಸಿದರು.

ಕೂಡಲೇ ಕನಿಷ್ಠ ವೇತನ ಜಾರಿಗೊಳಿಸಬೇಕು, ಬೀದರ್‌ ಮಾದರಿಯಲ್ಲಿ ಸಹಕಾರ ಸಂಘವನ್ನು ಚಿತ್ರದುರ್ಗದಲ್ಲಿ ಪ್ರಾರಂಭಿಸಬೇಕು. ಸೊಸೈಟಿ ಮೂಲಕ ವೇತನ ಪಾವತಿಸುವ ಮೂಲಕ ಸೇವಾ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ಕಾರ್ಮಿಕ ಇಲಾಖೆ ನಿಯಮದ ಪ್ರಕಾರ ವಾರದ ರಜೆ, ಇಎಸ್‌ಐ, ಪಿಎಫ್‌ ನೀಡಬೇಕು. ಬಿಸಿಎಂ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಹಿಂದಿನಂತೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ಸಿಬ್ಬಂದಿ ಕಡಿತದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ಗೆ ಮನವಿ ಸಲ್ಲಿಸಿದರು. ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ಹಿರಿಯ ಉಪಾಧ್ಯಕ್ಷ ಮರಡಿ ಜಂಬಯ್ಯ ನಾಯಕ, ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಯಶವಂತ ಕುಮಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್‌.ಪುನೀತ್‌ ಕುಮಾರ್‌ ಇದ್ದರು.

Similar Posts

Leave a Reply

Your email address will not be published. Required fields are marked *