ಕೊಪ್ಪಳ.16.ಜುಲೈ.25: ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2025-26ನೇ ಸಾಲಿಗಾಗಿ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಹಾಗೂ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಪದವಿ, ಡಿಪ್ಲೊಮಾವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು. ಪಿಂಚಣಿ ಇಲ್ಲದ ಕರ್ನಾಟಕ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ ಸಹ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಪುಸ್ತಕ ಧನ ಸಹಾಯ ಮತ್ತು ಡಿಗ್ರಿ ಡಿಪ್ಲೊಮಾ, ಜೆಒಸಿ ಅಥವಾ ಪ್ರೊಫೆಷನ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳ ವಿಶೇಷ ನಿಧಿಯಿಂದ ಶಿಷ್ಯವೇತನ ನೀಡಲಾಗುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದು.
2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳು ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ನಿಗದಿತ ನಮೂನೆಯ ಅರ್ಜಿ ಫಾರಂಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸೆಕ್ಟರ್ ನಂಬರ್ 22, ಪೊಲೀಸ್ ಪ್ಯಾಲೆಸ್ ಹತ್ತಿರ, ನವನಗರ, ಬಾಗಲಕೋಟೆ ಇವರ ಕಾರ್ಯಾಲಯದಿಂದ ಶುಲ್ಕ ರಹಿತವಾಗಿ ಪಡೆಯಬಹುದು.
ಶಿಷ್ಯವೇತನಕ್ಕಾಗಿ ಅರ್ಜಿಯೊಂದಿಗೆ ಸಲ್ಲಿಸುವ ಮಾಜಿ ಸೈನಿಕರ ಅಥವಾ ಅವಲಂಬಿತರ ಮೊಬೈಲ್ ಸಂಖ್ಯೆಯು ಮಕ್ಕಳ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08354-235434 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…