ಸ್ಪರ್ಧಾತ್ಮಕ ಯುಗದಲ್ಲಿ ಉದ್ಯಮಿಗಳು ನೂತನ ತಾಂತ್ರಿಕತೆಗಳನ್ನು ಬಳಸಿಕೊಳ್ಳಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ


ಡಿ.24 ಇಂದು ಬೀದರ್ ಜಿಲ್ಲೆಯಲ್ಲಿ ಉದ್ಯಾಮಿಗಳಿಗೆ ಆಧುನಿಕ ಸ್ಪರ್ಧಾತ್ಮಕ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯಮಿಗಳು ನೂತನ ತಾಂತ್ರಿಕತೆಗಳನ್ನು ಬಳಸುವುದರ ಜೊತೆಗೆ ಮಾರುಕಟ್ಟೆ ಸ್ಪರ್ಧೆ, ಕಡಿಮೆ ಉತ್ಪಾದನಾ ವೆಚ್ಚ ಹಾಗೂ ಉತ್ತಮ ಗುಣಮಟ್ಟದ ಉತ್ಪಾದನೆಗಳ ಬಗ್ಗೆ ಹೆಚ್ಚಿನ ಗಮನವಿಡಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಹೇಳಿದರು.


ಅವರು ಮಂಗಳವಾರ ಬೀದರನ ನಾವಡಗೇರಿ ಚಿಕ್ಕಪೇಟೆ ಹತ್ತಿರವಿರುವ ಮಸ್ಟಿಫ್ ಸೆಲೆಕ್ಟ್ ಹೋಟೆಲ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿಟಿಪಿಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ “ಎಂ.ಎಸ್.ಎA.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” ( RAMP) ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ರಫ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಉದ್ಯಮಕ್ಕೆ ಕಚ್ಚಾ ವಸ್ತು ಮುಖ್ಯ, ಕಚ್ಚಾ ವಸ್ತು ದೊರೆಯುವ ಸ್ಥಳ ಅಂತರ ಹಾಗೂ ಸಾಗಾಟದ ವೆಚ್ಚ ಸಹ ಅತೀ ಮಹತ್ವವಾಗಿರುತ್ತದೆ.

ಉತ್ಪಾದನಾ ವೆಚ್ಚಗಳನ್ನು ವಿವಿಧ ಹಂತಗಳಲ್ಲಿ ಕಡಿಮೆಗೊಳಿಸುವ ಬಗ್ಗೆ ಗಮನವಿರಬೇಕು. ಸಮಯದ ಉಳಿತಾಯ, ಕಾರ್ಮಿಕರ ಲಭ್ಯತೆ, ತಾಂತ್ರಿಕತೆಯ ವೆಚ್ಚಗಳನ್ನು ಸೇರಿ ಒಟ್ಟಾರೆಯಾಗಿ ಮಾರುಕಟ್ಟೆಯ ಸ್ಪರ್ಧೆಯಲ್ಲಿ ಉತ್ತಮ ಉತ್ಪನ್ನಗಳನ್ನು ನೀಡಲು ಉದ್ಯಮಿ ಶ್ರಮಿಸಬೇಕೆಂದರು.


ಸೂಕ್ಷö್ಮ, ಸಣ್ಣ, ಮಧ್ಯಮ ಕೈಗಾರಿಕಾ ಆರಂಭಿಸುವವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಾಲ ಹಾಗೂ ಕಡಿಮೆ ಬಡ್ಡಿ ಸಹಯಧನ ಇದೆ. ಗಡಿ ಹಾಗೂ ಸಣ್ಣ ಕೈಗಾರಿಕೆ ಘಟಕಗಳ ವಿಸ್ತರಣೆಗೆ ಆಧುನಿಕರ ತಾಂತ್ರಿಕ ಉನ್ನತೀಕರಣಕ್ಕೆ ವಿವಿಧ ಸೌಲಭ್ಯಗಳು ಲಭ್ಯವಿದ್ದು ಉದ್ಯಮಿಗಳು ಸದುಪಯೋಗಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಕರೆ ನೀಡಿದರು.


ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೊಳಿ ಮಾತನಾಡಿ, ಸಣ್ಣ ಕೈಗಾರಿಕೆಗಳಿಂದ ಸ್ಥಳೀಯ ಆರ್ಥಿಕತೆ ಬೆಳೆವಣಿಗೆಗೆ ಅನುಕೂಲವಾಗುತ್ತದೆ. ಸರಕಾರದ ಹೊಸ ಯೋಜನೆಗಳನ್ನು ಉದ್ಯಮಿಗಳು ಉಪಯೋಗಿಸಿಕೊಳ್ಳಬೇಕೆಂದರು.


ಈ ಸಂದರ್ಭದಲ್ಲಿ ಬೀದರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡ್ಟಿçÃಸ್ ಅಧ್ಯಕ್ಷರಾದ ಬಿ.ಜಿ.ಶೆಟಕಾರ, ಬೀದರ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ.ವಿಜಯಕುಮಾರ, ಕೆಮಿಕಲ್ ಮತ್ತು ಫಾರ್ಮಾಸ್ಯುಟಿಕಲ್ ಸಂಘದ ಅಧ್ಯಕ್ಷ ದೇವೇಂದ್ರಪ್ಪಾ, ವಿ.ಟಿ.ಪಿ.ಸಿ, ಕಲಬುರಗಿ ಶಾಖಾ ಕಛೇರಿಯ ಸಹಾಯಕ ನಿರ್ದೇಶಕ ಜಾಫರ್ ಖಾಸಿಂ ಅನ್ಸಾರಿ, ಕಾಸಿಯಾ ಅಧ್ಯಕ್ಷರಾದ ಎಂ.ಜಿ.ರಾಜಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

4 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

4 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago