ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲುಬದ್ಧತೆಯಿರಬೇಕು -ಸಚಿವ ಈಶ್ವರ ಬಿ.ಖಂಡ್ರೆ


ಬೀದರ.06.ಏಪ್ರಿಲ್.25: ಪರಿಶ್ರಮ ಮತ್ತು ಬದ್ಧತೆಯಿಂದ ಅಭ್ಯಾಸ ನಡೆಸಿದ್ದಲ್ಲಿ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲು ಸಾಧ್ಯ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ನುಡಿದರು.

ಅವರು ಶನಿವಾರದಂದು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿಯಲ್ಲಿರುವ ಬೀದರ ವಿಶ್ವವಿದ್ಯಾಲಯ ಬೀದರನ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಅಂಗನವಾಡಿಯಿಂದ ಹಿಡಿದು 10ನೇ ತರಗತಿ, ಪದವಿವರೆಗೆ, ಶಿಕ್ಷಣ ಹಕ್ಕು ಕಾಯ್ದೆಯಡಿ ನೂರಾರು ಕೋಟಿ ಅನುದಾನ ನೀಡಿ ಶಿಕ್ಷಣಕ್ಕೆ ಒತ್ತು ಕೊಡುತ್ತಿದ್ದು, ಆದರೆ ಪದವಿ ಪೂರ್ವ ಶಿಕ್ಷಣ, ಸ್ನಾತಕೋತ್ತರ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ.

ವಿಶ್ವವಿದ್ಯಾಲಯಗಳು ವಿಭಾಗಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪದವಿಗಳಿಗೆ ಮಾನ್ಯತೆ ಸಿಗುವಂತಾಗಬೇಕು. ವಿಶ್ವವಿದ್ಯಾಲಯ ಅಭಿವೃದ್ಧಿ ಆದರೆ ಮಾತ್ರ ಸಾರ್ಥಕವಾಗುತ್ತದೆ.

ಬೀದರ ವಿಶ್ವವಿದ್ಯಾಲಯಕ್ಕೆ 124 ಕಾಲೇಜು ಸಂಯೋಜಿತ ಇದ್ದು, ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಮಹಾವಿದ್ಯಾಲಯಗಳು ಇದ್ದು, 30 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದಿನ ವರ್ಷ 40 ಸಾವಿರಗಿಂತ ಅರ್ಧ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತಾಗಬೇಕು.

ನಮ್ಮ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನವ ಸಂಪನ್ಮೂಲ ನಮ್ಮೆಲ್ಲರನ್ನು ಜಗತ್ತಿನಲ್ಲಿ ಎಲ್ಲ ಮಾನ್ಯತೆ ಇದೆ. ನಮ್ಮ ದೇಶದಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ ಆಗಿದ್ದಾರೆ, ವಿಜ್ಞಾನಿಗಳಾಗಿ ಬಾಹ್ಯಕಾಶ, ತಂತ್ರಜ್ಞಾನದಲ್ಲಿದ್ದಾರೆ. ಜಗತ್ತನ್ನು ನಿರ್ಮಾಣ ಮಾಡುವಲ್ಲಿ ನಮ್ಮ ವಿದ್ಯಾರ್ಥಿಗಳು ಪಾಲು ಇದೆ. ಇದೇ ಕಾರಣಕ್ಕೆ ದೇಶಗಳು ನಮ್ಮ ದೇಶದ ಕಡೆ ಮುಖ ಮಾಡುತ್ತಿವೆ. ನಮ್ಮ ವಿದ್ಯಾರ್ಥಿಗಳಲ್ಲಿ ಯಾವುದೇ ಕೊರತೆ ಇಲ್ಲ. ಎಲ್ಲ ಗುರಿ ಮುಟ್ಟಿ ಪರಿಶ್ರಮ ಮಾಡಬೇಕೆಂದರು.

ಬೀದರ ವಿಶ್ವವಿದ್ಯಾಲಯ ಪ್ರಾರಂಭ ಮಾಡಿದ್ದೇವೆ. ಇದರಲ್ಲಿ 75% ವಿದ್ಯಾರ್ಥಿನಿಯರು 25% ಪ್ರತಿಶತ ವಿದ್ಯಾರ್ಥಿಗಳಿದ್ದಾರೆ. ಎಲ್ಲಾ ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಒತ್ತು ನೀಡಿ ಮೀಸಲಾತಿ ನೀಡಿ ನಮ್ಮ ಸರ್ಕಾರ ಶಕ್ತಿ ನೀಡುತ್ತಿದೆ. ಅನೇಕ ವಿಷಯಗಳಲ್ಲಿ ಬೇಡಿಕೆ ಇದೆ ಆ ವಿಷಯಗಳನ್ನು ಅರಿತು ವಿದ್ಯಾಭ್ಯಾಸ ಮಾಡಿದರೆ ಎಲ್ಲಾ ಕಂಪನಿಗಳು ನಮ್ಮನ್ನು ಉದ್ಯೋಗ ಹುಡುಕಿಕೊಂಡು ಬರುತ್ತವೆ. ನಮ್ಮ ಕೈಗಾರಿಕಗಳನ್ನು ಏನು ಬೇಡಿಕೆ ಇದೆ ಅದನ್ನು ಕಲಿಯಬೇಕಾಗಿದೆ. ಕೌಶಲ್ಯ ತರಬೇತಿ ಅವಶ್ಯಕತೆ ಇದೆ. ಗಡಿ ಭಾಗದಲ್ಲಿಂದು ಬೀದರ ವಿಶ್ವವಿದ್ಯಾಲಯಕ್ಕೆ 312 ಎಕರೆ ಜಮಿನು ಇದೆ. ಶೀಘ್ರದಲ್ಲಿ ಅನುದಾನ ಒದಗಿಸಲಾಗುವುದು ಹತ್ತು ಹಲವಾರು ಬೇಡಿಕೆಗಳು ಇವೆ. ಮೂಲಸೌಕರ್ಯಗಳು ಒದಗಿಸಲಾಗುವುದು.

ಬೀದರ ವಿಶ್ವವಿದ್ಯಾಲಯಕ್ಕೆ ಈಗಾಗಲೇ 29 ಉಪನ್ಯಾಸಕರ ಹುದ್ದೆಗಳು ಮಂಜೂರು ಆಗಿದ್ದು, ಆಟೋನಮಸ್ ಬಾಡಿ ಇದ್ದು, ಕಾನೂನು ಬದ್ಧವಾಗಿ ಮೆರಿಟ ಹಾಗೂ ರೋಷ್ಠರ ಆಧಾರ ಮೇಲೆ ಯಾವುದೇ ದೂರು ಬಾರದಂತೆ ನೇಮಕಾತಿ ಮಾಡಿಕೊಳ್ಳಬೇಕು. 109 ಬೋಧಕೇತರ ಸಿಬ್ಬಂದಿ, ಇದೇ ಮಾನದಂಡದ ಪ್ರಕಾರ 371.ಜೆ ಅಡಿ ನೇಮಕಾತಿ ಮಾಡಿಕೊಳ್ಳಬೇಕು.

ನಮ್ಮ ಯಾರದು ಹಸ್ತಕ್ಷೇಪ ಇರುವುದಿಲ್ಲ. ಪ್ರತಿಭಾವಂತ ಪ್ರಾಧ್ಯಾಪಕರು, ಶಿಕ್ಷಕರು ಸಿಗಲಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಬೀದರ ವಿಶ್ವವಿದ್ಯಾಲಯದ ಅಭಿವೃದ್ಧಿಪಡಿಸಲು 300 ಕೋಟಿ ಅನುದಾನ ಬೇಕಾಗಿದ್ದು, ಪ್ರತಿ ವರ್ಷ 100 ಕೋಟಿಯಂತೆ ಯೋಜನೆ ವರದಿ ತಯ್ಯಾರಿಸಿ ನೀಡಿದ್ದಲ್ಲಿ ಕೆಕೆಆರ್‍ಡಿಬಿಯಿಂದ ಅನುದಾನ ಒದಗಿಸಲಾಗುವುದೆಂದರು.

ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಬೀದರ ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಮಾಹಿತಿ ತಿಳಿದಿದ್ದು, ಕೂಡಲೇ ನಾನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಸೇರಿ ಕೆಕೆಆರ್‍ಡಿಬಿ ಇಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಎಂದರು. ಬೀದರ ಜಿಲ್ಲೆ 500 ವರ್ಷಗಳ ಹಿಂದೆ ಮಹಮ್ಮದ ಗವಾನ ಯೂನಿವಸಿಟಿ ಮೂಲಕ ವಿವಿಧ ದೇಶಗಳಿಂದ ಬಂದು ನಮ್ಮಲ್ಲಿ ಶಿಕ್ಷಣ ಪಡೆದಿದ್ದಾರೆ ಎಂಬುವುದು ಹೆಮ್ಮೆಯ ವಿಷಯ ಎಂದರು.

ಇದೇ ಸಂದರ್ಭದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ಪ್ರೋ.ಜಿ.ಎಸ್.ಬಿರಾದಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬಿದರ ನಗರ ಸಭೆ ಅಧ್ಯಕ್ಷರಾದ ಮಹ್ಮದ ಗೌಸ, ಬ್ಯಾಲಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಅಶೋಕ ಮೋತಿರಾಮ, ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಮುಡೆಪ್ಪಾ ಕಮಠಾಣಿ, ಬಿಸಿ. ಶಾಂತಲಿಂಗ ಸಾವಳಗಿ, ಶಿವನಾಥ ಎಂ.ಪಾಟೀಲ, ಸಚಿನ ಶಿವರಾಜ, ವಿಠಲದಾಸ ದೇವಿದಾಸ ಪ್ಯಾರೆ, ಅರ್ಜುನ ಮರೆಪ್ಪಾ ಕನಕ, ಅಬ್ದುಲ್ ಸತ್ತಾರ ಚಾಂದಸಾಬ್, ಕು.ವೈಷ್ಣವಿ ಪಾಟೀಲ, ಶಿಕ್ಷಣ ನಿಶಾಮ, ಡೀನರು ಹಾಗೂ ಸಿಂಡಿಕೇಟ್ ಸದಸ್ಯರು, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಮೌಲ್ಯಮಾಪನ ಕುಲಸಚಿವರಾದ ಪ್ರೋ. ಪರಮೇಶ್ವರ ನಾಯಕ, ಶಿಕ್ಷಣ ಸಿಕಾಯ ಡೀನರು ಹಾಗೂ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಮಲ್ಲಿಕಾರ್ಜುನ ಕನಕಟ್ಟೆ, ನಿವೃತ್ತ ಪ್ಯಧ್ಯಾಪಕರು, ಬೋಧಕ ಬೋಧಕೇತರು ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ತಿಗಳು ಉಪಸ್ಥಿತರಿದ್ದರು.

prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

5 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

6 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

6 hours ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

8 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

8 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

11 hours ago