Categories: ದೇಶಬೀದರ

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ


ಬೀದರ.03.ಫೆಬ್ರುವರಿ.25:-ಕುಷ್ಠರೋಗವು ಯಾವುದೇ ಶಾಪ ಪಾಪದಿಂದ ಬರುವುದಿಲ್ಲ, ಇದು ಒಂದು ಮೈಕೋಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು ಇದು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭಂಧಪಟ್ಟಿದ್ದು ದೇಹದ ಯಾವುದೇ ಭಾಗದಲ್ಲಿ ಸ್ವರ್ಶ ಜ್ಞಾನವಿಲ್ಲದ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದಲ್ಲಿ ಅದು ಕುಷ್ಠರೋಗದ ಲಕ್ಷಣಗಳಾಗಿರಬಹುದು.

ಯಾವುದೆ ತರಹದ ಮಚ್ಚೆಗಳು ಇದಲ್ಲಿ ತಮ್ಮ ಸಮೀಪದ ಪ್ರಾಥಮೀಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಕ್ಷಿಸಿಕೊಳ್ಳಬೇಕು.

ರೋಗ ಕಂಡು ಬಂದಲ್ಲಿ  ಬಹುಔಷದಿ ಚಿಕಿತ್ಸೆಯಿಂದ ಗುಣ ಪಡಿಸಬಹುದು ಇದಕ್ಕೆ ಯಾವುದೆ ರೀತಿಯ ಹೆದರುವಂತಹ ಅಗತ್ಯವಿಲ್ಲಾ ಎಂದು ಬೀದರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ ಹೇಳಿದರು.


ಅವರು ಇಂದು ನಗರದ ಜಿಜಾಮಾತಾ ಪ್ರೌಡ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಸ್ಪರ್ಶ್ ಕುಷ್ಠರೋಗ ಜಾಗೃತಿ ಪಾಕ್ಷಿಕ ಅಭಿಯಾನವನ್ನು ದಿನಾಂಕ: 30-01-2025 ರಿಂದ 13-02-2025 ರವರಗೆ ಜಿಲ್ಲೆಯಾಧ್ಯಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬನ್ನಿರಿ ನಾವೆಲ್ಲರೂ ಸೇರಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ  ಕನಸಾದ ಕುಷ್ಠಮುಕ್ತ  ಭಾರತವನ್ನು  ಮಾಡಲು  ಪ್ರತಿಜ್ಞಾ ಮಾಡೋಣ ಎಂದು ಪ್ರತಿಜ್ಞೆ ಮಾಡಿಸಿದ್ದರು.


ಈ ಕಾರ್ಯಕ್ರಮದಲ್ಲಿ ಜಿಜಾಮಾತಾ ಪ್ರೌಡ ಶಾಲೆಯ ಮುಖ್ಯ ಗುರುಗಳಾದ  ಪರಮೇಶ್ವರ ಬಿರಾದಾರ, ಶಿಕ್ಷಕರಾದ ಅರ್ಜುನ ಧೊಳೆ, ವಾಸುದೇವ ರಾಠೋಡ್, ರಾಜಶೇಖರ, ಸೂರ್ಯಕಾಂತ, ಅನಿತಾ, ಆಶ್ವಿನಿ, ಭಾರತಿ ಸೇರಿದಮತೆ ಅರೋಗ್ಯ ಸಿಬ್ಬಂದಿಗಳು, ಶಿಕ್ಷಕರು  ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಕಾರ್ಯಕ್ರಮ ನಿರೂಪಣೆ ತಾನಾಜಿ ಆರ್ ನಿರಗೂಡೆ ನಡೆಸಿಕೊಟ್ಟರು ಬಸವರಾಜ ರಾಯಪಳ್ಳಿ ವಂದರ್ನಾಪಣೆಯನ್ನು ಸಲ್ಲಿಸಿದ್ದರು.

prajaprabhat

Share
Published by
prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago