ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ


ಬೀದರ.13.ಫೆಬ್ರುವರಿ.25:- ಕುಷ್ಠರೋಗವು ಮುಖ್ಯವಾಗಿ ಚರ್ಮ ಮತ್ತು ನರಗಳಿಗೆ ಸಂಬಂಧಿಸಿದಂಥ ಕಾಯಿಲೆ ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾವನಿಲ್ಲದ ಮಚ್ಚೆ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು, ಮುಖದಲ್ಲಿ ಮತ್ತು ಕಿವಿಗಳ ಮೇಲೆ ಎಣ್ಣೆ ಹಚ್ಚಿದಂತೆ ಹೊಳೆಯುವುದು ಮತ್ತು ಗಂಟುಗಳು ಕಾಣಿಸುವುದು, ಕುಷ್ಠರೋಗದ ಲಕ್ಷಣಗಳಾಗಿರುತ್ತವೆ.

ಪ್ರಾರಂಭದ ಹಂತದಲ್ಲಿ ಪತ್ತೆ ಹಚ್ಚಿದರೆ ಬೇಗನೇ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೋಹನದಾಸ ಹೇಳಿದರು.


ಅವರು ಇಂದು ಸರಕಾರಿ ಕನ್ಯಾ ಪ್ರೌಡ ಶಾಲೆ ಹುಮನಾಬಾದನಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದಲ್ಲಿ ಸರಕಾರಿ ಕನ್ಯಾ ಪ್ರೌಡ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮತ್ತು ಸಿಬ್ಬಂದಿಗಳಿಗೆ ಕುಷ್ಠರೋಗ ಪಾಕ್ಷಿಕ ನಿಮಿತ್ಯ ಅರಿವು ಕಾರ್ಯಕ್ರಮ ಶಪಥ ಗೃಹಣ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಕುಷ್ಠರೋಗಕ್ಕೆ ಬಹು ಔಷದ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಒಂದರಿಂದ ಐದು ಮಚ್ಚೆಗಳ್ಳಿದ್ದರೆ ಆರು ತಿಂಗಳು ಚಿಕ್ಕಿತ್ಸೆ ನೀಡಲಾಗುತ್ತದೆ, ಐದು ಮಚ್ಚೆಗಳಿಂತ ಹೆಚ್ಚು ಮಚ್ಚೆಗಳು ಕಂಡು ಬಂದಾಗ ಒಂದು ವರ್ಷದ ಚಿಕ್ಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.


ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಿವಕುಮಾರ ಕಿವಡೆ ಮಾತನಾಡಿ, ಕುಷ್ಠರೋಗವು ಯಾವುದೇ ಶಾಪ ಪಾಪದಿಂದ ಬರುವುದಿಲ್ಲ ಇದು ಒಂದು ಮೈಕೋಬ್ಯಾಕ್ಟೀರಿಯಂ ಲೆಪ್ರೆಎ ಂಬ ರೋಗಾಣುವಿನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು ಇದು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭಂಧಪಟ್ಟಿದ್ದು ದೇಹದ ಯಾವುದೇ ಭಾಗದಲ್ಲಿ ಸ್ವರ್ಶಜ್ಞಾನವಿಲ್ಲದ ತಿಳಿ ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳಿದ್ದಲ್ಲಿ ಅದು ಕುಷ್ಠರೋಗದ ಲಕ್ಷಣಗಳಾಗಿರ ಬಹುದು ಯಾವುದೇ ತರಹದ ಮಚ್ಚೆಗಳು ಇದಲ್ಲಿ ತಮ್ಮ ಸಮೀಪದ ಪ್ರಾಥಮೀಕ ಆರೋಗ್ಯ ಕೇಂದ್ರಕ್ಕೆ ಭೇಟಿನಿಡಿ ಪರಿಕ್ಷಿಸಿಕೋಳಬೇಕು ರೋಗ ಕಂಡು ಬಂದಲ್ಲಿ  ಬಹುಔಷದಿ ಚಿಕಿತ್ಸೆಯಿಂದ ಗುಣ ಪಡಿಸಬಹುದು ಇದಕ್ಕೆ ಯಾವುದೇ ರೀತಿಯ ಹೆದರುವಂತಹ ಅಗತ್ಯವಿಲ್ಲಾ ಎಂದು ಹೇಳಿದರು.


ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮೋಹನದಾಸ ರವರು “ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ” ಕನಸಾದ ಕುಷ್ಠಮುಕ್ತ ಭಾರತವನ್ನು ಮಾಡಲು ಪ್ರತಿಜ್ಞಾ ಮಾಡೋಣ ಎಂದು ಪ್ರತಿಜ್ಞೆ ಮಾಡಿಸಿದ್ದರು.


ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ರೋಹನ್, ಶಿಕ್ಷಕ ವೃಂದವರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

2 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

2 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

5 hours ago

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

9 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

9 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

9 hours ago