ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ತಿಳಿಸಿದ್ದಾರೆ.
ಅವರು ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ ಬೀದರ ಇವರ ಸಂಯುಕ್ತಾಶ್ರಯದಲ್ಲಿ “ಅಂತರರಾಷ್ರ‍್ಟೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ ಹಾಗೂ ಕಾರಾಗೃಹದಲ್ಲಿರುವ ಬಂಧಿಗಳ ಹಕ್ಕುಗಳ” ಅಂಗವಾಗಿ ಬೀದರ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಪ್ಪುಗಳು ಸಹಜ ಅವುಗಳನ್ನು ತಿದ್ದಿಕೊಂಡು ಬಂಧಿಗಳು ಮನವನ್ನು ಪರಿವರ್ತನೆಗೊಳಿಸಿಕೊಂಡು ಉತ್ತಮ ಜೀವನ ನಡೆಸಬೇಕೆಂದರು.
ಇದೇ ಸಂದರ್ಭದಲ್ಲಿ ಜೈಲಿನಲ್ಲಿರುವ ದೃಷ್ಠಿದೋಷವಿರುವ ಕೈದಿಗಳಿಗೆ ಕನ್ನಡಕವನ್ನು ವಿತರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಅಬ್ದುಲ ಹಫೀಜ ಎಲ್‌ಎಡಿಸಿ ವಕೀಲರು, ಜಿಲ್ಲಾ ಕಾರಾಗೃಹ ಅಧೀಕ್ಷಕ ದತ್ತಾತ್ರಿ ಆರ್. ಮೇದಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಖಯ್ಯಾ ಬಿ. ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ ಮಾಲಿಪಾಟೀಲ, ಕಾನೂನು ಪ್ರಾಧಿಕಾರದ ಸಿಬ್ಬಂದಿಗಳು, ಜಿಲ್ಲಾ ಕಾರಾಗೃಹ ಸಿಬ್ಬಂದಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎಲ್‌ಎಡಿಸಿ ವಕೀಲರು ಹಾಗೂ ರೋಟರಿ ಕ್ಲಬ ಸಿಬ್ಬಂಧಿ ವರ್ಗದವರು ಸೇರಿದಂತೆ ಇತರರ ಉಪಸ್ಥಿತರಿದ್ದರು.
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…