ಸ್ವಯಂ ಉದ್ಯಮ ಪ್ರಾರಂಭಿಸಿ ಆರ್ಥಿಕ ಅಭಿವೃದ್ಧಿ ಸಾಧಿಸಿ-ಲೋಕೆಶ ಮಾನಸಿಂಗ

ಬೀದರ.07.ಆಗಸ್ಟ್.25:- ಯುವಕರು ಉದ್ಯಮಗಳನ್ನು ಪ್ರಾರಂಭಿಸಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ಪಡೆದು ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಿ ಆರ್ಥಿಕವಾಗಿ ಅಭಿವೃಧ್ಧಿ ಸಾಧಿಸಬೇಕು ಎಂದು ಬೀದರ ಜಿಲ್ಲಾ ಕೌಶಲ್ಯ ಆಭಿವೃದ್ಧಿ ಅಧಿಕಾರಿ ಲೋಕೆಶ ಮಾನಸಿಂಗ ತಿಳಿಸಿದರು.

ಅವರಿಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ ಸರ್ಕಾರಿ ಐಟಿಐ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಐಟಿಐ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭಾವಿ ಉದ್ಯಮಶಿಲರುಗಳಿಗೆ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಾಕಷ್ಟು ಅವಕಾಶಗಳು ಲಭ್ಯವಿರುತ್ತದೆ. ನಮ್ಮ ದೇಶದಲ್ಲಿ ಯುವ ಜನ ಹೆಚ್ಚಿನ ಸಂಖೆಯಲ್ಲಿದ್ದು ಬುಧ್ಧಿವಂತರಿದ್ದಾರೆ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಶವಿರುತ್ತದೆ ಎಂದು ಹೇಳಿದರು.

ಬೀದರ ಲೀಡ ಬ್ಯಾಂಕ ಸ್ಟೇಟ್ ಬ್ಯಾಂಕ ಆಫ ಇಂಡಿಯಾದ ವ್ಯವಸ್ಥಾಪಕ ಸತೀಷಕುಮಾರ ಗಾಯಕವಾಡ ಮಾತನಾಡಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ, ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ ಬ್ಯಾಂಕ್ ವ್ಯವಹಾರಗಳ ಕುರಿತು ವಿವರವಾಗಿ ತಿಳಿಸಿದರು.

ಬೀದರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ಲಕ್ಷಿöಕಾಂತ ಮಾತನಾಡಿ, ಉದ್ಯಮ ಸ್ಥಾಪನೆಗೆ ಇರುವ ಸಾಲ ಸೌಲಭ್ಯಗಳು ಮತ್ತು ಇತರ ಸಂಬoಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವದು ಎಂದು ತಿಳಿಸಿದರು.

ಈ ಕಾರ್ಯಕ್ರವ್ಮದಲ್ಲಿ ಸಿಡಾಕ್ ಜಿಲ್ಲಾ ತರಬೇತಿದಾರ ಮಲ್ಲಪ್ಪಾ ಟಿ.ಮೇತ್ರೆ, ಸಂಪನ್ಮೂಲ ವ್ಯಕ್ತಿ ದಿಲೀಪಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

3 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

3 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

3 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

3 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

3 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

3 hours ago