ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಿoದ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ), 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿ, ಮತ್ತು 14 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿಗಳನ್ನು ನೀಡಲಾಗುತ್ತಿದ್ದು, ತರಬೇತಿಗಾಗಿ ಜೂನ್. 30 ರಂದು ಸಂದರ್ಶನ ನಡೆಯಲಿದ್ದು, ಜುಲೈ 1 ರಿಂದ ತರಬೇತಿ ಪ್ರಾರಂಭವಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.
ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಆಧಾರ್ ಕಾರ್ಡ್, ರೇಶನ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳು, ಮತ್ತು ವಿದ್ಯಾಭ್ಯಾಸದ ದಾಖಲೆಗಳ ಜೆರಾಕ್ಸ್, ಪಾಸ್‌ಪೋರ್ಟ್ ಅಳತೆಯ ಮೂರು ಫೋಟೋಗಳೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539 231038, ಮೊ.ಸಂ: 9483618178, 7259073827, 9538096796 ಮತ್ತು 9481085217ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…