ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಈ ಹಿಂದೆ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿದ್ದ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.
ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ ಈ ಆಡಳಿತ ಇಲಾಖೆಯ ಸೇವಾ ಸಿಂಧು ಯೋಜನೆಯಡಿ ನೋಂದಣಿ ಮಾಡಿಸಲು ಆನ್‍ಲೈನ್ ತಂತ್ರಾಂಶ ಅಭಿವೃದ್ದಿ ಪಡಿಸಿದ್ದು, ಈ ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ, ನವೀಕರಣ ಪ್ರಮಾಣ ಪತ್ರ ವಿತರಿಸಲಾಗುವುದು.
ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಹಿರಿಯ ನಾಗರಿಕರ ವೃದ್ದಾಶ್ರಮಗಳನ್ನು ನಡೆಸುತ್ತಿರುವ ಎಲ್ಲಾ ಅನುದಾನಿತ/ಅನುದಾನರಹಿತ ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕ https://sevasindhu.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣೆ ಪ್ರಮಾಣ ಪತ್ರ ಪಡೆಯಬೇಕೆಂದು ಈ ಮೂಲಕ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ.
ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08194-235284 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…