ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ, ಇಂದೆ ಅರ್ಜಿ ಸಲ್ಲಿಸಿ

ಬೆಂಗಳೂರು.21.ಜೂನ್.25:- ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ ನೀಡಲಾಗುತ್ತಿದ್ದು, ಈ ದಾಖಲೆ, ಅರ್ಹತಾ ಮಾನದಂಡ ಕಡ್ಡಾಯವಾಗಿದೆ.

ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತಾ ಮಾನದಂಡಗಳು

ವಯಸ್ಸು: ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ
ಆದಾಯ ಮಿತಿಯು:
ಗ್ರಾಮಾಂತರ ಪ್ರದೇಶ: ವಾರ್ಷಿಕ ₹98,000 ಒಳಗೆ
ನಗರ ಪ್ರದೇಶ: ವಾರ್ಷಿಕ ₹1,20,000 ಒಳಗೆ
ಚಾಲನಾ ಪರವಾನಗಿ: ಸರಿಯಾಗಿ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಿಂದ ಲಾಭ ಪಡೆದಿರಬಾರದು
ಈ ದಾಖಲೆಗಳು ಕಡ್ಡಾಯ
ಜಾತಿ ಹಾಗೂ ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್
ಚಾಲನಾ ಪರವಾನಗಿ ಪ್ರತಿ ( ಡಿ ಎಲ್)
ಬ್ಯಾಂಕ್ ಪಾಸ್ ಬುಕ್ ನಕಲು
ವಾಹನದ ಅಂದಾಜು ಕ್ವೊಟೇಶನ್/ಬೆಲೆಪಟ್ಟಿ
ಸ್ವಯಂ ಘೋಷಣಾ ಪತ್ರ
ಅರ್ಜಿ ಸಲ್ಲಿಕೆ ವಿಧಾನ
ಆನ್ಲೈನ್ ಮೂಲಕ: Seva Sindhu ಪೋರ್ಟಲ್
ಆಫ್ಲೈನ್ ಮೂಲಕ: ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ
ಹೆಚ್ಚಿನ ಮಾಹಿತಿಗಾಗಿ 080-22374832 8050770004 / 8050770005 ಸಂಪರ್ಕಿಸಬಹುದಾಗಿದೆ.

ಇತರ ಯೋಜನೆಗಳು


ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,

1) ಗಂಗಾ ಕಲ್ಯಾಣ ನೀರಾವರಿ ಯೋಜನೆ,

2 ) ಅರಿವು-ಶೈಕ್ಷಣಿಕ ಸಾಲ ಯೋಜನೆ,

3) ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ,

4) ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ     (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ.                                     


ಈ ಮೇಲ್ಕಂಡ ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಮಾತ್ರ ಅನ್ವಯವಾಗುತ್ತದೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ).


ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.ಅರ್ಹ ಹಿಂದುಳಿದ ವರ್ಗದವರು ಅರ್ಜಿಗಳನ್ನು ಆನ್ಲೈನ್ ಸೇವಾಸಿಂಧು ಪೋರ್ಟಲ್

  https://sevasindhu.karnataka.gov.in

ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ನಿಗಮದ ವೆಬ್ ಸೈಟ್http://www.dbcdc.karnataka.gov.in ಗೆ ಸಂಪರ್ಕಿಸಬಹುದು. ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನ.

prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

3 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

4 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

4 hours ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

6 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

6 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

9 hours ago