ಬೀದರ.04ಫೆಬ್ರುವರಿ.25:-ಮಾರ್ಚ.21 ರಿಂದ ಜರುಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸಧ್ಯದ ಶೈಕ್ಷಣಿಕ ಚಟುವಟಿಕೆಯನ್ನು ವೀಕ್ಷಿಸಲು ಬೀದರ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಇಂದು ನಗರದ ನೌಬಾದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳ ಅಭ್ಯಾಸ ಕ್ರಮವನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯ ಕುರಿತು ಸಂವಾದ ನಡೆಸಿ ಈವರೆಗೆ ಕಲಿತಾ ಗಣಿತ ಪ್ರಶ್ನೆಗಳನ್ನು ಬಿಡಿಸುವಂತೆ ಹೇಳಿದಾಗ ವಿದ್ಯಾರ್ಥಿಗಳು ಒಂದೇರಡು ಪ್ರಶ್ನೆಗಳನ್ನು ಸರಾಗವಾಗಿ ಬಿಡಿಸಿದರು. ನಂತರ ಗಣಿತ ಪಠ್ಯ ಕ್ರಮದ ಒಂದೇರಡು ಪಾಠಗಳನ್ನು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಬೋಧಿಸಿದರು.
ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ತರಬೇತಿಯನ್ನು ಹಾಗೂ ನಿರಂತರ ಪರೀಕ್ಷೆಯನ್ನು ವಾರಕ್ಕೊಮ್ಮೆ ಕೈಗೊಳ್ಳುವಂತೆ ಬೀದರ ತಾಲ್ಲೂಕಾ ಬಿಇಓ ಡಾ.ಬಿ.ಆರ್.ದೊಡ್ಡೆ ಇವರಿಗೆ ಸೂಚಿಸಿದರು.
ಈಗಾಗಲೇ ಡಿಸೆಂಬರ ತಿಂಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಂಡಿದ್ದು, ಉಳಿದ ಮೂರು ತಿಂಗಳಲ್ಲಿ ಪಠ್ಯಕ್ರಮ ಪುನರಾವರ್ತನೆ ಹಾಗೂ ಪಾಸಿಂಗ್ ಪ್ಯಾಕೇಜ್ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನಿರಂತರವಾಗಿ ಬೋಧಿಸಲಾಗುತ್ತಿದೆ.
ಸಧ್ಯ ಬೀದರನಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದಾರೆ ಎಂದು ಬೀದರ ತಾಲ್ಲೂಕಾ ಬಿಇಓ ಡಾ.ಬಿ.ಆರ್.ದೊಡ್ಡೆ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…