13/06/2025 9:12 PM

Translate Language

Home » ಲೈವ್ ನ್ಯೂಸ್ » ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ ಇವರು ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದವರಿಗೆ ಪುರುಷರು ಹಾಗು ಮಹಿಳೆಯರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ನಿರ್ದೇಶಕರು ಸಿಡಾಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತರಬೇತಿದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಯೋಜನೆ ವರದಿ ತಯಾರಿಸು ಕುರಿತ್ತು ಮಾರುಕಟ್ಟೆ ಸಮೀಕ್ಷ ಹಾಗು ಜಿ ಎಸ್ ಟಿ ಮತ್ತು ತೆರಿಗೆ ಹಾಗು ಇತ್ಯಾದಿ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿಯನ್ನು ನೀಡಲಾಗುವುದು, ಕಾರಣ 18 ವರ್ಷ ದಿಂದ 50 ವರ್ಷ ವಯೋಮಿತಿಯ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ದಿನಾಂಕ: 21-06-2025 ರೊಳಗಾಗಿ ತಮ್ಮ ಹೆಸರು ನೊಂದಾಯಿಸಿಕೊAಡು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9743012315 ಗೆ ಸಂಪರ್ಕಿಸಬಹುದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!