|

ಹದಿನೈದು ದಿನದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಿ- ಸಚಿವ ಈಶ್ವರ ಬಿ.ಖಂಡ್ರೆ

ಬೀದರ,28.ಅಗಸ್ಟ್ 25:- ಹದಿನೈದು ದಿನದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿರುವ ಹಾನಿಯ ಪರಾಮರ್ಶೆ ಸಭೆಯ ಉದ್ದೇಶಿಸಿ ಮಾತನಾಡಿದರು.

ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ಬೆಳೆ, ಮನೆ, ರಸ್ತೆ, ಸೇತುವೆ, ಕೆರೆಕಟ್ಟೆ ಮುಂತಾದವುಗಳು ಹಾನಿಗೊಳಗಾಗಿ ಬಹಳ ನಷ್ಟ ಉಂಟಾಗಿದೆ. ರೈತರ ಹೊಲಗಳ ಮಣ್ಣು ಕೊಚ್ಚಿ ಹೋಗಿ, ಕೃಷಿಗೆ ಮಣ್ಣು ಇಲ್ಲದಂತಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ 227 ಮನೆ ಹಾನಿ, 12,537 ಹೆಕ್ಟೇರ್ ಪ್ರದೇಶ ಬೆಳೆ ಹಾನಿ, 28 ಪ್ರಾಣಿ ಹಾನಿ, 6 ರೋಡ್ ಮತ್ತು 6 ಎಂಐ ಟ್ಯಾಂಕ್, 10 ಬ್ರೀಡ್ಜ್, 151 ವಿದ್ಯುತ್ ಪೊಲ್ ಸೇರಿದಂತೆ ಅನೇಕ ರೀತಿಯ ಹಾನಿಗಳು ಉಂಟಾಗಿವೆ. ಅನೇಕ ಪುನರನಿರ್ಮಾಣ ಕಾಮಗಾರಿ ಚಾಲನೆಯಲ್ಲಿದ್ದು, ಅದರಂತೆ ರಸ್ತೆ ಮತ್ತು ಸೇತುವೆಗಳು ತಕ್ಷಣ ಪುನರನಿರ್ಮಾಣ ಮಾಡಲಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣ ಸಮಿಕ್ಷೆ ನಡೆಸಿ, ಪರಿಹಾರ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಎಲ್ಲಾ ಕಡೆ ಸಂಚರಿಸಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು. ಔರಾದ ಮತ್ತು ಕಮಲನಗರ ತಾಲೂಕಿನ ರಸ್ತೆಗಳು ಸುಧಾರಣೆಗೊಳ್ಳಬೇಕು ಮತ್ತು ಬಸ್ ಸಂಚಾರ ಹೆಚ್ಚಿಸಬೇಕು ಹಾಗೂ ಕನ್ನಡ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.


ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ , ಪ್ರೋಬಿಷನರಿ ಐಎಎಸ್ ಅಧಿಕಾರಿ ರಮ್ಯಾ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Similar Posts

Leave a Reply

Your email address will not be published. Required fields are marked *