ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ ಏರ್ಪಡಿಸಲಾಗಿದೆ.

ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಬೆಳಗ್ಗೆ 10 ಗಂಟೆಗೆ ಶಾಸಕರ ಕಛೇರಿ ಆವರಣದಲ್ಲಿ ರ‍್ಯಾಲಿಗೆ ಚಾಲನೆ ನೀಡುವರು. ರ‍್ಯಾಲಿಯು ಶಾಸಕರ ಕಛೇರಿ‌‌‌ ಆವರಣದಿಂದ‌ ಹೊರಟು, ಅಗ್ನಿ ಬಸವಣ್ಣ ದೇವಸ್ಥಾನ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಎಪಿಎಂಸಿ ವೃತ್ತದ ಮಾರ್ಗವಾಗಿ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ತಲುಪಿ ಕೊನೆಗೊಳ್ಳುವುದು.

ಸ್ವಾತಂತ್ರ್ಯ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಬೇಕು, ಜನರಲ್ಲಿ ದೇಶಾಭಿಮಾನ ಬೆಳೆಸಬೇಕು. ರಾಷ್ಟ್ರಧ್ವಜದ ಕುರಿತು ಗೌರವ ಭಾವನೆ ಮೂಡಿಸುವ ಉದ್ದೇಶದಿಂದ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರು ಕೊಟ್ಟಿರುವ ಕರೆಯಂತೆ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ.

ಪರಕೀಯರ ಆಳ್ವಿಕೆಯಲ್ಲಿದ್ದ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ಲಕ್ಷಾಂತರ ಹೋರಾಟಗಾರರು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ಅಂತಹ ಮಹನೀಯರ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರಲ್ಲಿಯೂ ದೇಶಪ್ರೇಮ ಜಾಗೃತಗೊಳಿಸುವ ಉದ್ದೇಶದಿಂದ ವೈವಿದ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಈ ದಿಶೆಯಲ್ಲಿ ಔರಾದನಲ್ಲಿ ನಡೆಯುವ ತಿರಂಗಾ ಬೈಕ್ ರ‍್ಯಾಲಿಯಲ್ಲಿ ಸ್ಥಳೀಯ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಹಾಗೂ ಸಾವಿರಾರು ದೇಶಾಭಿಮಾನಿಗಳು ಭಾಗವಹಿಸಲಿದ್ದು, ಮಂಡಲ್ ಅಧ್ಯಕ್ಷರಾದಿಯಾಗಿ ಎಲ್ಲ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳಬೇಕು.

ಅಲ್ಲದೇ ಆ.13 ರಿಂದ 15ರ ವರೆಗೆ ಎಲ್ಲ ಮನೆ-ಮನೆಯ ಮೇಲೆ, ಕಛೇರಿ, ಅಂಗಡಿಗಳು, ವಾಹನಗಳ ಮೇಲೆ ‌ತ್ರಿವರ್ಣ ಧ್ವಜ ಪ್ರದರ್ಶಿಸಿ, ತ್ರಿವರ್ಣ ಧ್ವಜದೊಂದಿಗೆ‌ ಸೆಲ್ಫಿಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

2 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

2 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

9 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

9 hours ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

9 hours ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

9 hours ago