Home » ಲೈವ್ ನ್ಯೂಸ್ » ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ ಜುಲೈ.25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿoದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ ಆಗಸ್ಟ್ ತಿಂಗಳಲ್ಲಿ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿoದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜುಲೈ 25 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8217236973, 9844796998, 9483485489 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology