ಕೊಪ್ಪಳ ಜುಲೈ.25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿoದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಹಾಗೂ ಆಗಸ್ಟ್ ತಿಂಗಳಲ್ಲಿ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿoದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜುಲೈ 25 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 8217236973, 9844796998, 9483485489 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…