ಹಳ್ಳಿಖೇಡ(ಬಿ): ಮಹಿಳಾ ಸ್ವ ಸಹಾಯ ಗುಂಪುಗಳನ್ನುತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ


ಬೀದರ.06.ಫೆಬ್ರುವರಿ.25: ಹಳ್ಳಿಖೇಡ (ಬಿ) ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹಳ್ಳಿಖೇಡ (ಬಿ) ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಳ್ಳಿಖೇಡ (ಬಿ) ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ವಾರ್ಷಿಕ ಬೇಡಿಕೆಗೆ ಅನುಗುಣವಾಗಿ ಸಮರ್ಪಕವಾಗಿ ವಸೂಲಿ ಮಾಡುವ ಸ್ಥಳೀಯ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಮತ್ತು ಸ್ವಸಹಾಯ ಗುಂಪುಗಳ ವಸೂಲಾತಿ ಮೊತ್ತದಲ್ಲಿ ಶೇ 5% ರಷ್ಟನ್ನು ಪ್ರೂತ್ಸಾಹ ಧನದ ರೂಪದಲ್ಲಿ ನೀಡಲು ಸರ್ಕಾರವು ಆದೇಶಿಸಿದೆ.


ಅರ್ಹತೆಗಳ ವಿವರ: ಮಹಿಳಾ ಸ್ವ ಸಹಾಯ ಸಂಘವು ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಿರಬೇಕು. ಸಂಘಗಳು ಸದಸ್ಯರು ಕನಿಷ್ಟ 7ನೇ ತರಗತಿವರೆಗೆ ಶಿಕ್ಷಣವನ್ನು ಬಳಸುವ ಸಾಮರ್ಥ್ಯ ಹೊಂದಿರಬೇಕು.

ಬ್ಯಾಂಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತ ಸಾಲ ಮರುಪಾವತಿ ಮಾಡಿರಬೇಕು. ಸ್ವ-ಸಹಾಯ ಗುಂಪು ಸಂಬAದಪಟ್ಟ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿನಲ್ಲಿ ಡೇ-ನಲ್ಮ ಅಭಿಯಾನದಡಿ ನೊಂದಾಯಿಸಿಕೊAಡು ಮಾನ್ಯತೆ ಇರುವ ಎಂ, ಐ ಎಸ್ ಕೋಡ ಹೊಂದಿರಬೇಕು.

ಸ್ವ ಸಹಾಯ ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ ಖಾತೆಯನ್ನು ಹೊಂದಿರಬೇಕು. ಸ್ವ ಸಹಾಯ ಸಂಘ ರಚನೆಯಾಗಿ ಕನಿಷ್ಟ 3 ವರ್ಷ ಹೊಂದಿರಬೇಕು.

ಸ್ವ ಸಹಾಯ ಗುಂಪು ಮತ್ತು ಗುಂಪಿನ ಸದಸ್ಯರು ಯಾವುದೇ ಅಪರಾದ ಅಥವಾ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಹಿನ್ನೆಲೆ ಹೊಂದಿರಬಾರದು. ನಗರ ಸ್ಥಳಿಯ ಸಂಸ್ಥೆಯಿoದ ನಿಗದಿಪಡಿಸಿದ ಆಸ್ಥಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಯನ್ನು ಗುರಿಗೆ ತಕ್ಕಂತೆ ಕಾರ್ಯ ನಿರ್ವಹಿಸಲು ಆಸಕ್ತಿ ಮತ್ತು ಬದ್ದತೆಯನ್ನು ಹೊಂದಿರಬೇಕು.


ಅರ್ಹ ಇಚ್ಛೆಯುಳ್ಳ ಸ್ವ-ಸಹಾಯ ಸಂಘಗಳು ಈ ಮೇಲಿನ ಅರ್ಹತೆ ಹೊಂದಿದ್ದಲ್ಲಿ ಎಲ್ಲಾ ದಾಖಲಾತಿಗಳೊಂದಿಗೆ 15 ದಿವಸದೊಳಗಾಗಿ ಮುಖ್ಯಾಧಿಕಾರಿಗಳು, ಹಳ್ಳಿಖೇಡ (ಬಿ) ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago