ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ

ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ, ಅರಿವಿನ ಬೆಳಕನ್ನು ಹೆಚ್ಚಿಸುವ ಪುಸ್ತಕಗಳು ಮನೆಬಾಗಿಲಿಗೆ ತಲುಪುತ್ತಿವೆ. ಗ್ರಾಮೀಣ ಮಟ್ಟದಲ್ಲಿ ಜ್ಞಾನಾರ್ಜನೆಗೆ ಸವಲತ್ತುಗಳ ಕೊರತೆ ನೀಗುತ್ತಿದೆ. ಓದಿನ ಅವಕಾಶಗಳಿಂದ ವಂಚಿತರಾಗುತ್ತಿದ್ದ ಮಕ್ಕಳಿಗೆ ಮಾಹಿತಿ ಕಣಜವೇ ದೊರಕುತ್ತಿದೆ.

ಇದು ಸಾಧ್ಯವಾಗುತ್ತಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅರಿವು ಕೇಂದ್ರಗಳಿಂದ. ಗ್ರಾಮೀಣ ಭಾಗದಲ್ಲಿ 6,599 ಹೊಸ ಗ್ರಂಥಾಲಯಗಳ ಸ್ಥಾಪನೆಯೊಂದಿಗೆ ಅರಿವು ಕೇಂದ್ರಗಳು ಮತ್ತಷ್ಟು ವಿಸ್ತಾರಗೊಳ್ಳುತ್ತಿವೆ. ಅರಿವು ಕೇಂದ್ರಗಳಿಂದ ಉಂಟಾಗುತ್ತಿರುವ ಪ್ರಯೋಜನ, ಯಶೋಗಾಥೆಗಳಿಂದ ಸ್ಫೂರ್ತಿ ಪಡೆದ ಜನರು ತಮ್ಮ ಹಳ್ಳಿಗಳಲ್ಲಿಯೂ ಇಂತಹ ಜ್ಞಾನ ಭಂಡಾರದ ಸ್ಥಾಪನೆಗಾಗಿ ಬೇಡಿಕೆ ಇರಿಸುತ್ತಿದ್ದಾರೆ.

ಜನರ ಮನವಿಗಳಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಯುಪಿಎಸ್ ವ್ಯವಸ್ಥೆಯ ಖರೀದಿಗಾಗಿ ಅನುದಾನ ಮಂಜೂರು ಮಾಡಲಾಗಿದೆ.

ಪ್ರಸ್ತುತ ಅಸ್ತಿತ್ವದಲ್ಲಿರುವ ಗ್ರಂಥಾಲಯಗಳು ದಿನಪತ್ರಿಕೆ ಓದಲು ಸೀಮಿತವಾಗಿಲ್ಲ. ಅವು ಡಿಜಿಟಲ್ ಸ್ವರೂಪ ಪಡೆದಿವೆ. ಇಲ್ಲಿ ಅನೇಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಈ ಗ್ರಂಥಾಲಯಗಳನ್ನು ಬಳಸಿಕೊಂಡು ಜನರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ.

ಜ್ಞಾನ ದೀವಿಗೆ ಬೆಳಗಿಸುವ ಈ ಕೇಂದ್ರಗಳು ಭವಿಷ್ಯದ ಪ್ರಬುದ್ಧ ಪ್ರಜೆಗಳನ್ನು ರೂಪಿಸುವ ವೇದಿಕೆಯಾಗಿ ಹೊರಹೊಮ್ಮುತ್ತಿವೆ. ಮಕ್ಕಳ ಅಧ್ಯಯನಕ್ಕೆ ಪೂರಕವಾದ ಪುಸ್ತಕಗಳು, ತಾಂತ್ರಿಕ ತಿಳಿವಳಿಕೆಗೆ ಅಗತ್ಯವಾದ ಕಂಪ್ಯೂಟರ್‌ ಸೌಲಭ್ಯಗಳು ಗ್ರಾಮೀಣ ಮಟ್ಟದಲ್ಲಿ ಕ್ರಾಂತಿ ಮೂಡಿಸುತ್ತಿವೆ. ಹಳ್ಳಿ ಹಳ್ಳಿಗೂ ಈ ಯೋಜನೆಯನ್ನು ತಲುಪಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ.

prajaprabhat

Recent Posts

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

1 hour ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

8 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

11 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

11 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

12 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

18 hours ago