ಮೈಸೂರು.24.ಜುಲೈ,2025 ನ್ಯಾಯಾಲಯದಲ್ಲಿ ವ್ಯಾಜ್ಯ ಮುಗಿಯುವವರೆಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಮನವಿ ಮಾಡಿದ್ದಾರೆ.
ಈ ಕುರಿತು ಸಚಿವ ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ದಿನಾಂಕ:-2/8/2025 ರಂದು ಮುಗಿಯಲ್ಲಿದೆ.
ಏಕ ಕಾಲದಲ್ಲಿ ಸರಿ ಸುಮಾರು 10500 ಅತಿಥಿ ಉಪನ್ಯಾಸಕರು ಕರ್ತವ್ಯದಿಂದ ಬಿಡುಗಡೆ ಹೊಂದಲಿದ್ದಾರೆ. ಇದರಿಂದ ಕಾಲೇಜಿನಲ್ಲಿ ಪಾಠಪ್ರವಚನಕ್ಕೆ ತೊಂದರೆಯಾಗಲಿದ್ದು, ಅಲ್ಲದೆ ಸ್ಥಾನಕ್ಕೆ ಪರ್ಯಾಯವಾಗಿ ನೇಮಿಸಿಕೊಳ್ಳಲು ನ್ಯಾಯಾಲಯದಲ್ಲಿ ವ್ಯಾಜ್ಯವಿರುವುದರಿಂದ ಯಾವುದೇ ನೇಮಕಾತಿಯ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.
ಈ ಕಾರಣದಿಂದಾಗಿ ಇಲಾಖೆಯು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದರಿಂದ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ 2 ತಿಂಗಳಿಗೆ ಪರೀಕ್ಷೆ ಬರುವುದರಿಂದ. ವಿದ್ಯಾರ್ಥಿಗಳ & ಶೈಕ್ಷಣಿಕ ಹಿತದೃಷ್ಟಿಯಿಂದ ವ್ಯಾಜ್ಯವು ಇತ್ಯರ್ಥ ಆಗುವವರೆಗೂ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗಳನ್ನು ಸೇವೆಯಲ್ಲಿ ಮುಂದುವರೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…