ಹಾವೇರಿ.25.ಮಾರ್ಚ್.25:- ರಾಜ್ಯದಲಿ ವಿಶ್ವವಿದ್ಯಾಲಯ ಮುಚ್ಚುವ ಅಥವಾ ವಿಲೀನಗೊಳಿಸುವುದು ಕೆಲಸ ಸರ್ಕಾರ ಮಾಡುತ್ತಿದೆ. ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ಬದಲು ಕರ್ಣಾಟಕ ವಿಶ್ವವಿದ್ಯಾಲಯ ಜೊತೆ ವಿಲೀನಗೊಳಿಸುವುದು ಸರ್ಕಾರ ಚಿಂತನೆ ನಡೆಸುತ್ತಿದೆ. ಸರ್ಕಾರದ ಈ ನಿರ್ಧಾರ ಸರಿಯಲ್ಲ. ಈ ರೀತಿ ಮಾಡಿದರೆ, ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಎಚ್ಚರಿಸಿದರು.
ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ
ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ‘ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೋಮವಾರ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಜನರ ಆಶೋತ್ತರಗಳನ್ನು ಈಡೇರಿಸುವುದು ಎಷ್ಟು ಮುಖ್ಯವೋ, ಶಿಕ್ಷಣ ನೀಡುವುದೂ ಅಷ್ಟೇ ಮುಖ್ಯ. ಪ್ರತಿಯೊಬ್ಬರನ್ನು ಶಿಕ್ಷಣವಂತರನ್ನಾಗಿ ಮಾಡಿ ಸ್ವಾವಲಂಬಿಗಳಾಗಿಸಲು ಪೂರಕ ಯೋಜನೆಗಳನ್ನು ಜಾರಿಗೆ ತರಬೇಕು. ಆದರೆ, ಸರ್ಕಾರ ಹಾವೇರಿ ವಿಶ್ವವಿದ್ಯಾಲಯವನ್ನು ವಿಲೀನದ ಹೆಸರಲ್ಲಿ ಮುಚ್ಚಲು ಹೊರಟಿರುವುದು ಖಂಡನೀಯ’ ಎಂದರು.
‘ಹಾವೇರಿ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ಜಿಲ್ಲೆಯ ಎಲ್ಲ ಸ್ವಾಮೀಜಿಗಳು ಒಗ್ಗಟ್ಟಾಗಿದ್ದೇವೆ. ಸರ್ಕಾರ ಈ ವಿಶ್ವವಿದ್ಯಾಲಯ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು. ಹಾವೇರಿ ವಿಶ್ವವಿದ್ಯಾಲಯವನ್ನು ಉಳಿಸಿಕೊಂಡು, ಸೂಕ್ತ ಅನುದಾನ ನೀಡಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎ. ಮುರಿಗೆಪ್ಪ ಮಾತನಾಡಿ, ‘ರಾಜ್ಯ ಸರ್ಕಾರವೇ ಸ್ಥಾಪಿಸಿರುವ ವಿಶ್ವವಿದ್ಯಾಲಯವನ್ನು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವೇ ಮುಚ್ಚುತ್ತಿರುವುದು ವಿಪರ್ಯಾಸ. ಹಾವೇರಿ ವಿಶ್ವವಿದ್ಯಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಹೋರಾಟ ನಡೆಯಬೇಕಿತ್ತು. ಆದರೆ, ಈಗ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ಹೋರಾಟ ಮಾಡುವ ಸ್ಥಿತಿ ಬಂದಿರುವುದು ಶೋಚನೀಯ’ ಎಂದರು.
‘ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಮಾತ್ರವಲ್ಲದೇ ಪೋಷಕರು ಸಹ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಪಕ್ಷಾತೀತವಾಗಿ ಹೋರಾಟ ನಡೆಸಿ ವಿಶ್ವವಿದ್ಯಾಲಯ ಉಳಿಸಿಕೊಂಡು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು’ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಏಕಾಏಕಿ ವಿಶ್ವವಿದ್ಯಾಲಯ ಮುಚ್ಚಿದರೆ, ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ, ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
ಸಾಹಿತಿ ಸತೀಶ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಣ್ಣದ ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಎಐಟಿಯುಸಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಮುಖಂಡರಾದ ಉಡಚಪ್ಪ ಮಾಳಗಿ, ಮಲ್ಲಿಕಾರ್ಜುನ ಬಳ್ಳಾರಿ ಇದ್ದರು.
ಮುಖ್ಯಮಂತ್ರಿ ಭೇಟಿ
‘ಜಿಲ್ಲೆಯ ಆರು ಜನ ಶಾಸಕರು ವಿಶ್ವವಿದ್ಯಾಲಯ ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಹಾವೇರಿ ವಿಶ್ವವಿದ್ಯಾಲಯ ಮುಚ್ಚದಂತೆ ಸರ್ಕಾರದ ಮನವೋಲಿಸುತ್ತಿದ್ದಾರೆ’ ಎಂದು ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಹೇಳಿದರು. ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು ‘ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಮುಖಂಡರ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕರೆದೊಯ್ದು ಭೇಟಿ ಮಾಡಿಸುತ್ತೇನೆ’ ಎಂದರು.
2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…