|

ಹಾಸ್ಟಲ್‌ಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಬೀದರ.17.ಜೂನ್.25:- ಬೀದರನ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಕರ್ಯಗಳ ಕುರಿತು ಮಾಹಿತಿ ಪಡೆದರು.


ಅವರು ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸವಲತ್ತುಗಳನ್ನು ಪರಿಶೀಲಿಸಿದರು. ಊಟ, ತಿಂಡಿ, ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.


ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಚಂದೋರಿ ಗ್ರಾಮದಲ್ಲಿ ನಡೆಯುತ್ತಿರುವ ನಬಾರ್ಡ ಹೊಸ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಕ್ರೀದ್ ಹಬ್ಬದಂದು ನಡೆದ ಗಲಾಟೆ
ಕುರಿತು ಶಾಂತಿ ಸಭೆ ನಡೆಸಿದ ಜಿಲ್ಲಾಧಿಕಾರಿ

Similar Posts

Leave a Reply

Your email address will not be published. Required fields are marked *