ಹಿಂದುಳಿದ ವರ್ಗಗಳ ಅಭಿವೃದ್ಧಿ’ಗೆ ಸ್ವಾವಲಂಬಿ ಸಾರಥಿ’ ಸೇರಿ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ!

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ.

2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ 

https:/sevasindhu.karnataka.gov.in

ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್

 https://dbcdo.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago