ಹಿಂದುಳಿದ ವರ್ಗಗಳ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನ

ಕೊಪ್ಪಳ.13.ಆಗಸ್ಟ್.25 ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (Accriditation Card) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು.

ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‌ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.


ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್ 22ರ ಸಂಜೆ 5 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು.

ಲಕೋಟೆಯ ಮೇಲ್ಬಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ಲಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

1 hour ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

4 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

4 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

4 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

11 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

11 hours ago