ಹಿಂದೂರಾಷ್ಟ್ರದ ಸಂವಿಧಾನ ಸಿದ್ಧವೆಂದು ಹೇಳಿದ ಸ್ವಾಮೀಜಿಯನ್ನು ಗಡಿಪಾರು ಮಾಡಲು ಮನವಿ.!

ಬೀದರ.04.ಫೆ.25:- ಇಂದು ದೇಶದಲ್ಲಿ ಹಿಂದೂರಾಷ್ಟ್ರದ ಸಂವಿಧಾನಕ್ಕಾಗಿ 501 ಪುಟಗಳ ಕರಡು ಪತ್ರಿ ಸಿದ್ದಪಡಿಸಲಾಗಿದೆ ಎಂದು ಸಂವಿದಾನ ವಿರೋಧಿ ಹೇಳಿಕೆ ನೀಡಿರುವ ಸಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಅವರ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಿ ಕೂಡಲೇ ಗಡಿಪಾರು ಮಾಡಬೇಕು ಎಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟ ಸಮಿತಿಯ ಒಕ್ಕೂಟವು ಆಗ್ರಹ ಮಾಡಿದೆ.

ಇಂದು ಚಿಟಗುಪ್ಪಾ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಶಾಂಭವಿ ಪೀಠಾಧೀಶ ಸ್ವಾಮಿ ಆನಂದ್ ಸ್ವರೂಪ್ ಮಹರಾಜ್ ಅವರ ಅಖಂಡ ಹಿಂದೂರಾಷ್ಟ್ರದ ಸಂವಿಧಾನ ಸಿದ್ಧವೆಂದು ವಿವಾದಾತ್ಮಕ ಹೇಳಿಕೆ ನಿಡಿರುವುದನ್ನು ಖಂಡಿಸಲಾಗಿದೆ.

ಇಂದು ರಾಷ್ಟ್ರಾದ್ಯಂತ ಅಂಖಡ ಹಿಂದೂರಾಷ್ಟ್ರ ಸಂವಿಧಾನವನ್ನು ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲಿಯೇ ಅದನ್ನು ಜನತೆಯ ಮುಂದಿಡಲು ಸಿದ್ದತೆ ನಡೆದಿದೆ.

ದಕ್ಷಿಣ ಭಾರತದ 11 ಮತ್ತು ಉತ್ತರ ಭಾರತದ 14 ವಿದ್ವಾಂಸರನ್ನು ಒಳಗೊಂಡ ಸಂವಿಧಾನ ರಚನಾ ಸಮಿತಿಯು ಧರ್ಮಶಾಸ್ತ್ರಗಳು, ರಾಮರಾಜ್ಯ, ಶ್ರೀಕೃಷ್ಣ ರಾಜ್ಯ, ಮನುಸ್ಮ್ರತಿ, ಮತ್ತು ಚಾಣಕ್ಯನ ಅರ್ಥಶಾಸ್ತ್ರವನ್ನು ಅಭ್ಯಾಸಿಸಿ 501 ಪುಟಗಳ ಸಂವಿಧಾನವನ್ನು ಸಿದ್ದಪಡಿಸಿದೆ.

ಇದನ್ನು ಫೆ.3ರ ವಸಂತ ಪಂಚಮಿಯ ದಿನ ಮಹಾಕುಂಭ ಮೇಳದಲ್ಲಿ ಅನಾವರಣಗೊಳಿಸಲಾಗುವುದು ಎಂದು ಅವರು ಬಹಿರಂಗವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದೀಲಿಪಕುಮಾರ್ ವರ್ಮಾ, ಗೌರವಾಧ್ಯಕ್ಷ ಗೌತಮ ಬಗದಲ್ಕರ್, ಜನರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ರಾಜಕುಮಾರ್ ಸಿಂಧೆ, ಸಂದೀಪ ಕಟ್ಟಿಮನಿ, ಬಿಲಾಲ ಬೇಮಳಖೇಡಾ, ಓಂಕಾರ ಮೊರೆ, ಮಿಥುನ್ ವರ್ಮಾ, ಶಿವಕುಮಾರ್ ಮಂಗಲಗಿ ಹಾಗೂ ಯೂಸೂಫ್ ಅಲಿ ಜಮಾದಾ ಸೇರಿದಂತೆ ಇತರರು ಭಾಗವಹಿಸಿದ್ದರು.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago