|

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ: ಪ್ರಸ್ತಾವನೆಗಳ ಆಹ್ವಾನ

ಬೀದರ.24.ಜುಲೈ.25:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ (ದಿ: 01-10-2025) ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುತ್ತದೆ.


ಕಾರಣ ಜಿಲ್ಲೆಯ ಹಿರಿಯ ನಾಗರಿಕರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಲೂರ ಬೀದರ ಈ ಕಛೇರಿಯಿಂದ ಪಡೆದು, ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ದಿನಾಂಕ: 25-08-2025.ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿ, ಮೈಲೂರ ಬೀದರ ದೂರವಾಣಿ ಸಂಖ್ಯೆ: 08482-234647, 9513081723 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *