|

ಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ,

ಬೀದರ.17.ಮೇ.25:- ಬೀದರ ಜಿಲ್ಲೆಯಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ, ಶ್ರೀ ವಿಠಲ-ರುಕ್ಮಿಣಿ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ ಭಕ್ತರೊಂದಿಗೆ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಸಮಾಜದಲ್ಲಿ ಭಕ್ತಿ, ಶ್ರದ್ಧೆ ಮತ್ತು ಶಾಂತಿಯ ವಾತಾವರಣ ನಿರ್ಮಾಣವಾಗುತ್ತದೆ. ಜೊತೆಗೆ, ಇಂದಿನ ಪವಿತ್ರ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಕಾರ್ಯವನ್ನು ನೆರವೇರಿಸಲಾಗಿದ್ದು, ಅವರ ವೀರತ್ವ, ದೇಶಭಕ್ತಿಯ ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದು ಈಶ್ವರ ಖಂಡ್ರೆ ಅವರು ಅಭಿಪ್ರಾಯ ಪಟ್ಟರು.

Similar Posts

Leave a Reply

Your email address will not be published. Required fields are marked *