ಹೃದಯಾಘಾತದಿಂದ ಬೀದರಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಸಾವು

ಬೀದರ್, ಜು.10: ಹೃದಯಾಘಾತದಿಂದ ಜಿಲ್ಲೆಯ ‌ಬಸವಕಲ್ಯಾಣ ತಾಲೂಕಿನ ಹುಲಸೂರ ಸರ್ಕಾರಿ ಪ್ರಥಮ‌ದರ್ಜೆ ಕಾಲೇಜಿನ  ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಅವರು ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ಮಹಾವಿಧ್ಯಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೃದಯಘಾತವಾಗಿ ನಿಧನ ಹೊಂದಿದ್ದಾರೆ.      ಮೃತರು ಪತ್ನಿ, ಪುತ್ರ, ಪೋಷಕರು ಸೇರಿದಂತೆ ಅಪಾರ ಬಂಧು‌-ಮಿತ್ರರನ್ನು ಅಗಲಿದ್ದಾರೆ.

ಮೂಲತಃ ಕಲಬುರಗಿ ಜಿಲ್ಲೆಯ ಗಡಿಕೇಶ್ವರ ಗ್ರಾಮದ ಡಾ.ರವಿಕುಮಾರ್ ಅವರು ಸಹೋೋದ್ಯೋಗಿಯೊಬ್ಬರಿಗೆ‌ ಕರೆ ಮಾಡಿ ಇಂದು ಪರೀಕ್ಷಾ ಕರ್ತವ್ಯವಿದೆ. ಕಾಲೇಜಿಗೆ‌ ಬರ್ತಾ ಇದ್ದೇನೆ. ಆದರೆ ಸೊಂಟ ಮತ್ತು ಎದೆ ನೋಯುತ್ತಿದೆ ಎಂದು ತಿಳಿಸಿದ್ದಾರೆ. ತಕ್ಷಣ ನೀವು ಕಾಲೇಜಿಗೆ ಬರುುವುದು ಬೇಡ ಯಾರಾದರೂ ನಿಮ್ಮ ಕರ್ತವ್ಯವನ್ನು ಮಾಡುತ್ತೇವೆ. ಕೂಡಲೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಅಷ್ಟರಲ್ಲಿ‌ ಸಾವು‌ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

6 ವರ್ಷಗಳಿಂದ  ಕನ್ನಡ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ರವಿಕುಮಾರ್, ಪಿಎಚ್ ಡಿ, ನೆಟ್,   ಸ್ಲೆಟ್ ಪದವಿ ಪಡೆದಿದ್ದರೂ   ತಾರತಮ್ಯವಿಲ್ಲದೇ ಎಲ್ಲಾ ಅತಿಥಿ‌ ಉಪನ್ಯಾಸಕರಿಗೆ ಸೇವಾ ಭದ್ರತೆ ಲಭಿಸಿಬೇಕು ಎಂದು ಬಯಸುತ್ತಿದ್ದರು ಎಂದು ಆಪ್ತರು ತಿಳಿಸಿದ್ದಾರೆ.   

    ರಾಜಧಾನಿ‌ ಬೆಂಗಳೂರಿನಲ್ಲಿ ಬೃಹತ್ ಹೋರಾಟ‌ ಹಮ್ಮಿಕೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿಬೇಕು, 2024-25ರಲ್ಲಿ  ಸೇವೆ ಸಲ್ಲಿಸಿದ ಎಲ್ಲರನ್ನೂ ಮುಂದುವರೆಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸುತ್ತಿರುವ ಸಂದರ್ಭದಲ್ಲಿ ಡಾ. ರವಿಕುಮಾರ್ ಅವರ ಅಕಾಲಿಕ‌ ನಿಧನ  ಅತಿಥಿ ಉಪನ್ಯಾಸಕರ ಬಳಗದಲ್ಲಿ ಶೋಕವನ್ನುಂಟು ಮಾಡಿದೆ. 

  ಸಂತಾಪ: ಡಾ. ರವಿಕುಮಾರ್ ಅವರ ಅಕಾಲಿಕ‌ ನಿಧನಕ್ಕೆ ರಾಜ್ಯ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘ ಸಂತಾಪ ಸೂಚಿಸಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago