ಹೃದಯ ಜ್ಯೋತಿ ಯೋಜನೆ ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ವಿಸ್ತರಣೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:24.ಜನವರಿ.25.ಹೃದಯಾಘಾತ ಈ ಸಮಸ್ಯೆ ದೈನಂದಿನ ಹೆಚ್ಚು ಆಗ್ತದೆ ಈ ಸಮಸ್ಯೆಗೆ ಕಡಿವಾಣ ಮಾಡೋಕೆ ಸರ್ಕಾರ “ಹೃದಯ ಜ್ಯೋತಿ ಯೋಜನೆ” ಈ ರಾಜ್ಯ ರಾಜ್ಯವ್ಯಾಪಿ ವಿಸ್ತರಿಸಲಾಗಿದೆ.

ಹೃದಯಾಘಾತ ಸಂಭವಿಸಿದ ಸಂದರ್ಭದ ಗೋಲ್ಡನ್ ಹವರ್‌ನಲ್ಲಿ ಜೀವರಕ್ಷಕ ಚುಚ್ಚುಮದ್ದು ನೀಡುವ ಪುನೀತ್ ರಾಜ್‍ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು

ಗುರುವಾರ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಮಂಚೇಗೌಡನ ಪಾಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ನಿರ್ಮಿಸಲಾಗಿರುವ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಪುನೀತ್ ಹೃದಯ ಜ್ಯೋತಿ ಯೋಜನೆ ನೂರಾರು ಜನರ ಬದುಕನ್ನು ಉಳಿಸಿದೆ, ಇದೂವರೆಗೆ 250 ಜನರನ್ನು ರಕ್ಷಿಸಲಾಗಿದೆ, ರಾಜ್ಯದ 74 ತಾಲೂಕು ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿದೆ, ಹೃದಯ ಸ್ತಂಭನವಾದಾಗ ವ್ಯಕ್ತಿಗೆ ಒಂದರಿಂದ ಮೂರು ಗಂಟೆ ಅವಧಿಯೊಳಗೆ ಜೀವರಕ್ಷಕ ಚುಚ್ಚುಮದ್ದು ನೀಡುವ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ವಿಸ್ತರಿಸಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ.

ಈ ಯೋಜನೆಯನ್ನು ಮುಂಬರುವ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯ ಸರಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿದೆ, ಅದುವೇ ಗೃಹ ಆರೋಗ್ಯ ಯೋಜನೆ. ಪ್ರತಿಯೊಂದು ಮನೆಗೆ ತೆರಳಿ ಮನೆಯ ಸದಸ್ಯರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿ ಅವರಲ್ಲಿರುವ ಕಾಯಿಲೆಯನ್ನು ಗುರುತಿಸಿ, ಅದನ್ನು ನಿಯಂತ್ರಿಸುವ ಕೆಲಸವನ್ನು ಈ ಯೋಜನೆಯ ಮೂಲಕ ಮಾಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ದೃಷ್ಟಿ ದೋಷಕ್ಕೆ ಉಚಿತ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಿಸುವ ಆಶಾಕಿರಣ ಯೋಜನೆ ಇದೀಗ ಎಂಟು ಜಿಲ್ಲೆಗಳಲ್ಲಿ ಮಾತ್ರ ಲಭ್ಯವಿದ್ದು, ಆ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ.

ಆ ಮೂಲಕ ಕಣ್ಣಿನ ದೋಷವುಳ್ಳವರಿಗೆ ಉಚಿತವಾಗಿ ಆಪರೇಷನ್ ನಡೆಸಿ ಉಚಿತ ಕನ್ನಡಕ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ವರ್ಷದ ಎಪ್ರಿಲ್ ನಂತರ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ.ಗಳ ಗೌರವಧನ ನೀಡುವ ಹೆಜ್ಜೆ ಇಡಲಾಗಿದೆ. ರಾಜ್ಯದಲ್ಲಿರುವ ಆರೋಗ್ಯ ಸೇವೆಗಳನ್ನು ಮತ್ತಷ್ಟು ವಿಸ್ತರಿಸಲು ರಾಜ್ಯ ಸರಕಾರ ಯತ್ನಿಸುತ್ತಿದೆ.

ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಈ ಇಲಾಖೆ ಅವಲಂಬಿತವಾಗಿದೆ, ವೈದ್ಯರು ಹಾಗೂ ಸಿಬ್ಬಂದಿ ಬದ್ಧತೆಯಿಂದ ಕೆಲಸ ಮಾಡಬೇಕು, ಆಗ ಸಾಕಷ್ಟು ಸಮಸ್ಯೆಗಳು ನೀಗುತ್ತವೆ ಎಂದು ಅವರು ತಿಳಿಸಿದರು.

ವೈದ್ಯರು ಸಹಾನುಭೂತಿಯಿಂದ ರೋಗಿಗಳನ್ನು ತಪಾಸಣೆ ಮಾಡಬೇಕು, ಉತ್ತಮ ವರ್ತನೆ ತೋರಬೇಕು, ರೋಗಿಗಳಲ್ಲಿ ಧೈರ್ಯ ತುಂಬಿದಾಗ ಮಾತ್ರ ಅವರಿಗೆ ಮಾನಸಿಕವಾಗಿ ಗಟ್ಟಿಯಾಗುತ್ತಾರೆ ಎಂದ ದಿನೇಶ್ ಗುಂಡೂರಾವ್, ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ಯಂತ್ರ ದುರಸ್ತಿ ಪಡಿಸಲಾಗುವುದು ಹಾಗೂ ಎಮ್.ಆರ್.ಐ ಯಂತ್ರವನ್ನು ಎರಡು ತಿಂಗಳೊಳಗೆ ಒದಗಿಸಲಾಗುವುದು ಎಂದರು.

ಸಂಸದ ಡಾ.ಸಿ.ಎನ್. ಮಂಜುನಾಥ್ ಮಾತನಾಡಿ, ಬದಲಾದ ಜೀವನ ಶೈಲಿಯಿಂದ ಸಾಕಷ್ಟು ಕಾಯಿಲೆಗಳು ಬಂದಿವೆ, ಹೃದಯಾಘಾತ ಕೇವಲ ನಗರ ಪ್ರದೇಶಗಳಿಗಷ್ಟೇ ಅಲ್ಲ ಹಳ್ಳಿಗಳಲ್ಲೂ ಕಂಡು ಬರುತ್ತಿದೆ, ಶ್ರೀಮಂತರಿಂದ ಹಿಡಿದು ಕೂಲಿ ಕಾರ್ಮಿಕರಲ್ಲೂ ಇದು ಕಂಡು ಬರುತ್ತಿದ್ದು ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕು ಆಸ್ಪತ್ರೆಗಳಲ್ಲಿ ಇದಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡುವ ಜೀವರಕ್ಷಕ ಚುಚ್ಚುಮದ್ದು ನೀಡಲಾಗುವುದು ಎಂದು ತಿಳಿಸಿದರು.

ಈ ಇಂಜೆಕ್ಷನ್ ಹೆಪ್ಪುಗಟ್ಟಿದ ರಕ್ತವನ್ನು ಕರಗಿಸುತ್ತದೆ, 18 ಸಾವಿರ ರೂಪಾಯಿಗಳ ಈ ಇಂಜೆಕ್ಷನ್ ನೀಡಿದಲ್ಲಿ ಹೃದಯಾಘಾತವಾದ ವ್ಯಕ್ತಿ ಮುಂದಿನ ಮೂರು ಗಂಟೆಯೊಳಗೆ ಚಿಕಿತ್ಸೆ ಪಡೆಯಲು ನೆರವಾಗಲಿದೆ.

ಈ ಹೃದಯ ಜ್ಯೋತಿ ಯೋಜನೆಗೆ ಚನ್ನಪಟ್ಟಣ ತಾಲೂಕು ಹೊರತಾಗಿದ್ದು, ಚನ್ನಪಟ್ಟಣ ತಾಲೂಕು ಆಸ್ಪತ್ರೆಯನ್ನು ಸೇರಿಸುವಂತೆ ಮನವಿ ಮಾಡಿದ ಅವರು, ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪಿಜಿಷಿಯನ್ ಅವಶ್ಯಕತೆ ಇದೆ, ಅವರನ್ನು ನೇಮಕ ಮಾಡುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಶಾಸಕ ಇಕ್ಬಾಲ್ ಹುಸೇನ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್.ನಟರಾಜ್ ಗಾಣಕಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ರಾಮನಗರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ರಾಜು, ಗೋಪಳ್ಳಿ ಗ್ರಾ.ಪಂ.

ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಶಿವಲಿಂಗಯ್ಯ, ಜಿ.ಪಂ. ಸಿಇಒ ದಿಗ್ವಿಜಯ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಈ ಯೋಜನೆಗೆ ಸರ್ಕಾರ ಪ್ರತಿ ತಾಲೂಕಾ ಹಾಗೂ ಪಂಚಾಯತ ಮಟ್ಟದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರ ಅದಷ್ಟ್ ಬೇಗಾ ಕ್ರಮವಹಿಸಬೇಕು

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago