ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ: ಮಳಿಗೆಗಳ ಪರವಾನಿಗೆ ರದ್ದು

ಕೊಪ್ಪಳ.16.ಜುಲೈ 25: ಕೊಪ್ಪಳ ಜಿಲ್ಲೆಗೆ ಬೇಡಿಕೆಯ ಅನ್ವಯ ರಸಗೊಬ್ಬರಗಳು ಸರಬರಾಜಾಗುತ್ತಿದ್ದು ಕೃಷಿ ಪರಿಕರ ಮಾರಾಟ ಮಳಿಗೆಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಲಾಗುತ್ತಿದೆ. ರಸಗೊಬ್ಬರಗಳ ವಿತರಣೆಯನ್ನು ಕೃಷಿ ಇಲಾಖೆಯಿಂದ ಉಸ್ತುವಾರಿ ಮಾಡಲಾಗುತ್ತಿದ್ದು, ಉಲ್ಲಂಘನೆಗಳು ಕಂಡುಬoದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.


ಅದರಂತೆ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಇವರ ಪರಿಶೀಲನೆಯಲ್ಲಿ ಕಂಡುಬAದಿದ್ದು, ಮಾರಾಟಗಾರರಾದ ಕನಕಗಿರಿ ತಾಲ್ಲೂಕಿನ ಮುಸಲಾಪುರದ  ಮೆ|| ಸಜ್ಜಲಶ್ರೀ ಆಗ್ರೋ ಕೇಂದ್ರ ಮತ್ತು ಕೊಪ್ಪಳ ತಾಲ್ಲೂಕಿನ ಇರಕಲ್‌ಗಡಾದ ಮೆ||  ಸ್ಪಂದನ ಆಗ್ರೋ ಟ್ರೇಡರ್ಸ್ ಇವರ ರಸಗೊಬ್ಬರ ಮಾರಾಟ ಪರವಾನಿಗೆಯನ್ನು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಕ್ಲಾಸ್ 3, 4, 5, 8 ಮತ್ತು 35 ರ ಉಲ್ಲಂಘನೆಗಳಿಗಾಗಿ ಅಮಾನತ್ತುಗೊಳಿಸಲಾಗಿದೆ ಮತ್ತು ರಸಗೊಬ್ಬರ ನಿಯಂತ್ರಣ ಆದೇಶ 1985 ರ ಉಲ್ಲಂಘನೆಗಾಗಿ ಇವರ ರಸಗೊಬ್ಬರ ಮಾರಾಟ ಪರವಾನಿಗೆಗಳನ್ನು ರದ್ದುಗೊಳಿಸಲಾಗಿರುತ್ತದೆ.

ರೈತರು ರಸಗೊಬ್ಬರ ಖರೀದಿಸುವ ಸಮಯದಲ್ಲಿ ಮಾರಾಟಗಾರರು ಖರೀದಿ ಬಿಲ್ ಅನ್ನು ನೀಡದೇ ಇದ್ದಲ್ಲಿ ಅಥವಾ ಕೃಷಿ ಪರಿಕರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬoದಲ್ಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರ ಕಂಡುಬoದಲ್ಲಿ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ),

ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ಮೊಬೈಲ್ ಸಂಖ್ಯೆ: 8277932117 ಇವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

4 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

5 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago