ಹೆಣ್ಣುಮಕ್ಕಳ ವ್ಯಾಸಂಗಕ್ಕೆ ವಿದ್ಯಾರ್ಥಿವೇತನ: ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್
ಬೆಂಗಳೂರು.07.ಸೆಪ್ಟೆಂಬರ್.25:- ರಾಜ್ಯದಲ್ಲಿ ಅಜೀಮ್ ಪ್ರೇಮ್‌ಜಿ ಪ್ರತಿಷ್ಠಾನವು ರಾಜ್ಯದ 36,000 ಹೆಣ್ಣು ಮಕ್ಕಳಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳಿಗೆ ಪಿಯುಸಿ ನಂತರದ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಅಜೀಮ್ ಪ್ರೇಮ್‌ಜಿ ಪ್ರತಿಷ್ಠಾನ ವಾರ್ಷಿಕ 110 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡಲಿದೆ. ಸೆ.19 ರಂದು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಗುವುದು ಎಂದರು.
ರಾಜ್ಯದ 40 ಪದವಿ ಕಾಲೇಜುಗಳನ್ನು ಮತ್ತು 10 ರಿಂದ 11 ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಾದರಿ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಜೊತೆಗೆ 9 ಸೆಂಟರ್ ಆಫ್ ಎಕ್ಸೆಲೆನ್ಸ್ ಕೇಂದ್ರಗಳನ್ನು ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಏಷ್ಯಾ ಅಭಿವೃದ್ಧಿ ಬ್ಯಾಂಕ್‌ನಿಂದ 2,500 ಕೋಟಿ ರೂ. ಪಡೆಯಲಾಗುವುದು ಎಂದು ಹೇಳಿದರು.
ಪದವಿ ಕಾಲೇಜುಗಳ 2000 ಬೋಧಕರ ನೇಮಕಾತಿ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. ಕೆಲವೇ ದಿನಗಳಲ್ಲಿ 310 ಪ್ರಾಂಶುಪಾಲರ ನೇಮಕಾತಿಯು ಪೂರ್ಣಗೊಳ್ಳಲಿದೆ. ಪದವಿ ಕಾಲೇಜುಗಳ 6,800 ಕ್ಕೂ ಹೆಚ್ಚು ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕರಿಗೆ ಪದೋನ್ನತಿ ನೀಡಲಾಗಿದೆ. ಯಾವುದೇ ಕಿರುಕುಳ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಬಡ್ತಿ ನೀಡಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಲಾಗಿದೆ. ಹೀಗೆ ಉನ್ನತ ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಬಿಎಂಟಿಸಿ ನೌಕರರಿಗೆ ಗುಡ್‌ನ್ಯೂಸ್: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ವಿಮಾ ಯೋಜನೆಯನ್ನ ಒಂದು ಕೋಟಿಗೆ ವಿಸ್ತರಣೆ ಮಾಡಿದೆ.
ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನೌಕರರಿಗೆ ಕೊಡಲಾಗಿದ್ದ ಒಂದು ಕೋಟಿ ವಿಮಾ ಯೋಜನೆಗೆ ಸಕರಾತ್ಮಕ ಪ್ರತಿಕ್ರಿಯೆ ಲಭಿಸಿದೆ. ಹಾಗಾಗಿ ಈ ಯೋಜನೆಯನ್ನ ಬಿಎಂಟಿಸಿ ನೌಕಕರಿಗೆ ಸಹ ಕೊಡಲು ಸರ್ಕಾರ ನಿರ್ಧಾರವಾಗಿದೆ. ಹಾಗಾಗಿ ಈ ವಿಚಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಸಾರಿಗೆ ಇಲಾಖೆ ಹೊಸ ಒಪ್ಪಂದವನ್ನ ಮಾಡಿಕೊಂಡಿದೆ.
ಬಿಎಂಟಿಸಿ ನೌಕರರಿಗೆ ಇನ್ನು ಮುಂದೆ ಒಂದು ಕೋಟಿ ರೂಪಾಯಿ ವಿಮೆ ಸೌಲಭ್ಯ ಸಿಗಲಿದೆ. ಇನ್ನು ಯಾವೆಲ್ಲಾ ನೌಕಕರು ಎಸ್‌ಬಿಐ ಬ್ಯಾಂಕ್‌ನಲ್ಲಿ ವೇತನ ಖಾತೆಯನ್ನು ಹೊಂದಿದ್ದಾರೋ ಅವರಿಗೆ ಈ ವಿಮೆ ಯೋಜನೆ ಸೌಲಭ್ಯ ಸಿಗುತ್ತದೆ.

