09/06/2025 3:25 PM

Translate Language

Home » ಲೈವ್ ನ್ಯೂಸ್ » ಹೆಲೋ ಬೀದರ…ಕಾರ್ಯಕ್ರಮ.. ಫೆ.3 ಕೆ ನಡೆಯಲಿದೆ.!

ಹೆಲೋ ಬೀದರ…ಕಾರ್ಯಕ್ರಮ.. ಫೆ.3 ಕೆ ನಡೆಯಲಿದೆ.!

Facebook
X
WhatsApp
Telegram

ಬೀದರ.02.ಫೆ.25:- ಬೀದರ ಜಿಲ್ಲೆಯಲ್ಲಿ ಪ್ರಯಾಣಿಕರಿಗೆ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧವಾಗಿ ಫೆ.3 ರಂದು ಮಧ್ಯಾಹ್ನ 3:30 ಗಂಟೆಯಿಂದ 5:30 ಗಂಟೆಯವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಫೋನ್ ಇನ್ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕರು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ: 77609 92200, 77609 92202 ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!