ಬೀದರ.05.ಜುಲೈ.25:- ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು ಮತ್ತು ರೈತರಿಗೆ ಸುಲಭವಾಗಿ ಕೃಷಿ ಯಂತ್ರೋಪಕರಣಗಳು ದೊರೆಯುವಂತೆ ಮಾಡಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೀದರ ಜಿಲ್ಲೆಗೆ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ 2 ಕಂಬೈನ್ಡ್ ಹಾರ್ವೇಸ್ಟರ್ ಹಬ್ ಗಳಿಗೆ ಹಾಗೂ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ 2 ಶುಗರ್ ಕೇನ್ ಹಾರ್ವೆಸ್ಟರ್ ಹಬ್, ಸಾಮಾನ್ಯ ವರ್ಗ (ಸಂಘ/ಸoಸ್ಥೆ) ಘಟಕದಡಿ 1 ಶುಗರ್ ಹಾರ್ವೆಸ್ಟರ್ ಹಬ್ ಮತ್ತು ವಿಶೇಷ ಘಟಕ ಯೋಜನೆಯಡಿ 1 ಶುಗರ್ ಹಾರ್ವೇಸ್ಟರ್ ಹಬ್ ಒಟ್ಟು 2 ಕಂಬೈನ್ಡ್ ಹಾರ್ವೆಸ್ಟರ್ ಹಬ್ ಮತ್ತು 4 ಶುಗರ್ ಹಾರ್ವೆಸ್ಟರ್ ಹಬ್‌ಗಳ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಪ್ರತಿ “ಶುಗರ್‌ಕೇನ್ ಹಾರ್ವೆಸ್ಟರ್ ಹಬ್” ನಲ್ಲಿ ಶುಗರ್‌ಕೇನ್ ಹಾರ್ವೆಸ್ಟರ್ ದೊಂದಿಗೆ ಅಂತರ ಸಾಲು ರೋಟವೇಟರ್ ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಪ್ರತಿ ಕಂಬೈನ್ಡ್ ಹಾರ್ವೆಸ್ಟರ್‌ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ನೊಂದಿಗೆ ಬೇಲರ್ ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ.
ಈ ಯೋಜನೆಯಡಿ ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ ಫಲಾನುಭವಿಗಳಿಗೆ ಶೇ. 40.00 ರಷ್ಟು ಸಹಾಯಧನ ಇರುತ್ತದೆ ಮತ್ತು ಸಂಘ/ಸoಸ್ಥೆ, ಪರಿಶಿಷ್ಟ ಜಾತಿ (ವೈಯಕ್ತಿಕ) ಪರಿಶಿಷ್ಟ ಪಂಗಡ (ವೈಯಕ್ತಿಕ) ಫಲಾನುಭವಿಗಳಿಗೆ ಶೇ. 50.00 ರಷ್ಟು ಸಹಾಯಧನ ಇರುತ್ತದೆ.
ದಾಖಲಾತಿಗಳು: ಪಹಣಿ ಪತ್ರ, ಜಾತಿ ಪ್ರಮಾಣ ಪತ್ರ ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಎಫ್.ಐ.ಡಿ (ಈIಆ) ಸಂಖ್ಯೆ, ಮತ್ತು ರೂ.100 ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಭಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ), ಸಂಘ/ಸoಸ್ಥೆಗಳಾದಲ್ಲಿ ಇತ್ತೀಚಿನ 2 ವರ್ಷಗಳ (2023-24, 2024-25) ಲೆಕ್ಕ ಪರಿಶೋಧನಾ ಪತ್ರ.
ಸಹಾಯ ಧನವು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬoಧಿಸಿರುವ ಬ್ಯಾಂಕ್ ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರ (ಇನ್ ಪ್ರಿನ್ಸಿಪಲ್ ಲೋನ್ ಸ್ಯಾಂಕ್ಷನ್ ಲೆಟರ್) ಮತ್ತು ಶುಗರ್‌ಕೇನ್ ಹಾರ್ವೆಸ್ಟರ್ ಹಬ್‌ಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಜಿದಾರರು ಮೇಲ್ಕಂಡ ಎಲ್ಲಾ ದಾಖಲಾತಿಗಳೊಂದಿಗೆ, ವ್ಯಾಪ್ತಿಯಲ್ಲಿ ಬರುವ ರೈತರೊಂದಿಗೆ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಕಟಾವಿಗೆ ಮಾಡಿಕೊಂಡ ಲಿಖಿತ “ಒಪ್ಪಂದ ಪ್ರಮಾಣ ಪತ” ವನ್ನು ಲಗತ್ತಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು.
ಆಸಕ್ತ ರೈತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಜುಲೈ.21 ರೊಳಗಾಗಿ ಸಂಬAಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಬೀದರ.06.ಜುಲೈ.25:- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು…
ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ…
ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ…
ಬೀದರ. ಜುಲೈ.25:- ಜೆಸ್ಕಾಂ, ಬೀದರ ವೃತ್ತ ವ್ಯಾಪ್ತಿಯ ಸಾರ್ವಜನಿಕ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಈಗಾಗಲೇ ಟೋಲ್ ಫ್ರೀ ನಂಬರ 1912…
ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ…