|

ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ. ಸಚಿವರಾದ ಶ್ರೀ ಈಶ್ವರ ಖಂಡ್ರೆಭೇಟಿ

ಬೀದರ.27.ಏಪ್ರಿಲ್.25:- ಇಂದು ಬೀದರ್ ಜಿಲ್ಲೆಗೆ ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡ 15 ಕೋಟಿ ರೂ ವೆಚ್ಚದ ಬೀದರ ಜಿಲ್ಲೆಯ ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಅರಣ್ಯ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಯೋಜನೆ ಪೂರ್ಣಗೊಂಡ ನಂತರ, ಬೀದರ ಜಿಲ್ಲೆಯ ಪರಿಸರ ಪ್ರವಾಸೋದ್ಯಮಕ್ಕೆ ಹೊಸ ಉತ್ಸಾಹ ಸಿಗಲಿದೆ. ಹೈದ್ರಾಬಾದ್ ಸೇರಿದಂತೆ ಇತರ ಪ್ರದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಾಯವಾಗಲಿದೆ.

ಸ್ಥಳೀಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಪ್ರಕೃತಿಯ ಸಂರಕ್ಷಣೆಗೆ ಈ ಯೋಜನೆ ಮಹತ್ವದ ಪಾತ್ರವಹಿಸುತ್ತದೆ.

Similar Posts

Leave a Reply

Your email address will not be published. Required fields are marked *