ಬೆಂಗಳೂರು.16.ಏಪ್ರಿಲ್ .25:- ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರು 01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು / ಕೇಸ್ ವರ್ಕರ್ 06 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 08 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ :
ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.
ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು.
ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರವನ್ನು ಎಲ್ಲಾ ದಾಖಲೆಗಳೊಂದಿಗೆ ಮೇ 02 ರ ಸಂಜೆ 5.30 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080- 29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…