ಬೆಂಗಳೂರು.19.ಜೂನ್.25:- ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.
ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯ್ನು ಜಾರಿಗೊಳಿಸಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಜನರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ.
ಮಹಿಳೆಯರ ಆರ್ಥಿಕ ಸ್ಥಿತಿಯನ್ನ ಸುಧಾರಿಸಲು ಸರ್ಕಾರ ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಅದ್ರಲ್ಲಿ ಈ ಉಚಿತ ಹೊಲಿಗೆ ಯಂತ್ರ ಯೋಜನೆಯೂ ಒಂದು. ಈ ಯೋಜನೆಯಡಿ ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನ ನೀಡಲಾಗುತ್ತಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು ಇಚ್ಛಿಸಿದ್ರೆ, ಈ ಯೋಜನೆಗೆ ಸಂಬಂಧಿಸಿದ ಕೆಲವು ಮುಖ್ಯ ಮಾಹಿತಿಗಳನ್ನ ನೆನಪಲ್ಲಿಡಿ.
* ಉಚಿತ ಹೊಲಿಗೆ ಯಂತ್ರ ಪಡೆಯಲು ಬಳಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು.
* ಈ ಯೋಜನೆಯ ಲಾಭ ಪಡೆಯುವ ಕೂಲಿ ಕಾರ್ಮಿಕರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು.
* ವಿಧವೆ ಮತ್ತು ಅಂಗವಿಕಲ ಮಹಿಳೆಯರು ಸಹ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಬಹುದು.
* ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು. ಅಥವಾ ಗ್ರಾಮೀಣ ಪ್ರದೇಶದಲ್ಲಿ ರೂ. 1.5 ಲಕ್ಷ, ನಗರ ಪ್ರದೇಶಗಳಲ್ಲಿ ರೂ. 2 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್,ವಯಸ್ಸಿನ ಪ್ರಮಾಣ ಪತ್ರ,ಆದಾಯ ಪ್ರಮಾಣ ಪತ್ರ,ಗುರುತಿನ ಚೀಟಿ,ಅಂಗವೈಕಲ್ಯವಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ,ನಿರ್ಗತಿಕ ವಿಧವೆ ಮಹಿಳೆಯರಿಗೆ ವಿಧವಾ ಪ್ರಮಾಣ ಪತ್ರ,
ಸಮುದಾಯ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಗ್ರಾಮವನ್ ಬೆಂಗಳೂರು ವನ್ ಸೇವ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ನೀವು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಲು ಇಚ್ಛಿಸಿದ್ರೆ, ಅಧಿಕೃತ ವೆಬ್ಸೈಟ್ Seva Sindhu 1 / ಗೆ ಭೇಟಿ ನೀಡಿ.
ಬೆಂಗಳೂರು.07.ಆಗಸ್ಟ್.25:- ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ…
ಹನೂರು.07.ಆಗಸ್ಟ್.25:- ಶ್ರೀ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ, ಇ ಎಲ್ ಸಿ,…
ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…