09ಜ. ಅಂಬೇಡ್ಕರ ವಿರುದ್ಧ ಅಮಿತ ಶಾ ಹೇಳಿಕೆ ಖಂಡಿಸಿ ಬೀದರ ಬಂದ ಗೆ ಕರೆ.

ಬೀದರ್ : 06.ಜನೆವರಿ.25: ಬೀದರ ಬಂದ ಗೆ ಕರೆ ನೀಡಲಾಗಿದೆ.ರಾಜ್ಯಸಭೆಯಲ್ಲಿ ಅಂಬೇಡ್ಕರ ಅವರನ್ನು ಅವಹೇಳನ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಡಿ.9 ರಂದು ಶಾಂತಿಯುತ ಬೀದರ್ ಬಂದ್ ಗೆ ಕರೆ ನೀಡಿದ್ದೇವೆ.

ಸಾರ್ವಜನಿಕರು ಈ ಬಂದ್ ಗೆ ಸಹಕರಿಸಬೇಕು ಎಂದು ಸ್ವಾಭಿಮಾನಿ ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯ ಅಧ್ಯಕ್ಷ ಉಮೇಶ್ ಸ್ವಾರಳ್ಳಿಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಡಿ.24 ರಂದು ಪ್ರತಿಭಟನೆ ಕೈಗೊಂಡು ಮನವಿ ಸಲ್ಲಿಸಿ ಅಮಿತ್ ಶಾ ರಾಜೀನಾಮೆಗೆ ಗಡುವು ನೀಡಿದ್ದೇವೆ. ಆದರೆ ಅವರು ಇನ್ನೂ ಅವರು ರಾಜೀನಾಮೆ ನೀಡಿಲ್ಲ ಹಾಗಾಗಿ ಬೀದರ್ ಬಂದ್ ಗೆ ಕರೆ ನೀಡಿದ್ದೇವೆ ಎಂದರು.

ಅಂದು ಬೆಳಿಗ್ಗೆ 8 ಗಂಟೆಗೆ ಎಲ್ಲರೂ ಅಂಬೇಡ್ಕರ್ ವೃತ್ತದ ಬಳಿ ಸೇರುತ್ತೇವೆ. ನಂತರ ಒಂದೊಂದು ತಂಡ ಒಂದೊಂದು ಮಾರ್ಗವಾಗಿ ನಗರದಾದ್ಯಂತ ಸಂಚರಿಸಿ ಅಂಗಡಿ -ಮುಗ್ಗಟ್ಟುಗಳನ್ನು ಬಂದ್ ಗೆ ಸಹಕರಿಸುವಂತೆ ಮನವಿ ಮಾಡುತ್ತೇವೆ. ಕೊನೆಗೆ ಅಂಬೇಡ್ಕರ್ ವೃತ್ತದ ಹತ್ತಿರ ನಮ್ಮ ಪ್ರಮುಖ ಹೋರಾಟಗಾರರು ಮಾತನಾಡಿದ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಆಟೋ ಚಾಲಕರು, ವ್ಯಾಪಾರಸ್ಥರು, ಅಂಗಡಿ ಮಾಲಕರು, ಸಾರಿಗೆ ಇಲಾಖೆ, ಅಬಕಾರಿ ಇಲಾಖೆಗೆ ಸೇರಿದಂತೆ ಎಲ್ಲಾ ಸಂಘಗಳ ಅಧ್ಯಕ್ಷರಿಗೆ ಬಂದ್ ಗೆ ಸಹಕರಿಸುವಂತೆ ಮನವಿ ಪತ್ರ ಸಲ್ಲಿಸಿದ್ದೇವೆ. ಹಾಗೆಯೇ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸುವಂತೆ ಡಿಡಿಪಿಐ, ಬಿಇಓ ಅವರಿಗೂ ಮನವಿ ಸಲ್ಲಿಸಿದ್ದೇವೆ. ಎಲ್ಲರೂ ಬೀದರ್ ಬಂದ್ ಗೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.

ಒಂದು ವೇಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡದಿದ್ದರೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಬಸ್ ವ್ಯವಸ್ಥೆ ಇರದ ಕಾರಣ ಪೋಷಕರು ತಮ್ಮ ವಾಹನಗಳ ಮೂಲಕ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜಿಗೆ ಕರೆದೋಯ್ಯುವ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದರು.

ಬೀದರ್ ಬಂದ್ ಗೆ ಜಿಲ್ಲೆಯ ಬುದ್ಧ, ಬಸವ, ಅಂಬೇಡ್ಕರ್ ರವರ ಅನುಯಾಯಿಗಳು, ಪ್ರಗತಿಪರರು, ಸರ್ವಧರ್ಮ ಗುರುಗಳು, ಚಿಂತಕರು, ಕಾರ್ಮಿಕರು, ಯುವಕ, ಯುವತಿಯರು ಸೇರಿದಂತೆ ಎಲ್ಲರು ಬೆಂಬಲ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇಂದು ಬೀದರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ರಾಜಕುಮಾರ್ ಮೂಲಭಾರತಿ, ಕಲ್ಯಾಣರಾವ ಭೋಸ್ಲೆ, ಚಂದ್ರಕಾಂತ್ ನಿರಾಟೆ, ಕಾರ್ಯಾಧ್ಯಕ್ಷ ವಿಷ್ಣುವರ್ಧನ್ ವಾಲ್ದೋಡ್ಡಿ, ಉಪಾಧ್ಯಕ್ಷರುಗಳಾದ ರಾಜಕುಮಾರ ಗುನ್ನಳ್ಳಿ, ಅಂಬರೀಷ್ ಕುದರೆ ಹಾಗೂ ಸಂಘಟನಾ ಕಾರ್ಯದರ್ಶಿ ರಾಹುಲ್ ಡಾಂಗೆ ಸೇರಿದಂತೆ ಇತರರು ಭಾಗವಹಿಸಿದ್ದರು.

ಬೀದರ ಬಂದ ಗೆ ಸಃಕರಿಸಬೇಕು ಅಂತಾ ಸರ್ವರಿಗೋ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದರು.

Source: www.prajaprabhat.com

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago