ಬೆಂಗಳೂರು.28.ಏಪ್ರಿಲ.25:- ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಟಿ) ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ಪೀಠವು ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ ಮಾಡಿದೆ.
ಜುಂಜಪ್ಪ ದಿನಗೂಲಿ ಆಧಾರದ ಮೇಲೆ 30 ವರ್ಷ ನಿರಂತರವಾಗಿ ಅರಣ್ಯ ವೀಕ್ಷಕ ಹಾಗೂ ಚಾಲಕನಾಗಿ ಕೆಲಸ ಮಾಡಿದ್ದರೂ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸಿ 2016ರ ಆ.29ರಂದು ಅರಣ್ಯ ಇಲಾಖೆ ಹಿಂಬರಹ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ವಜಾಗೊಳಿಸಿ 2019ರ ಜು.31ರಂದು ಆದೇಶಿಸಿತ್ತು.
ಇದರಿಂದ ಜುಂಜಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಇದೀಗ ಅವರ ಕೆಲಸ ಕಾಯಂಗೊಳಿಸುವಂತೆ ಆದೇಶ ಹೊರಡಿಸಿದೆ.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…