ಬೆಂಗಳೂರು.09.ಜುಲೈ.25:-ರಾಜ್ಯ ಸರ್ಕಾರ ಇಂದು ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿ ಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಇಬ್ಬರು ಜಿಲ್ಲಾಧಿಕಾರಿಗಳು ಸೇರಿದಂತೆ ಒಟ್ಟು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವಿಜಯನಗರದ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಬಾಲನ್ ಟಿ ಹಾಗೂ ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಬಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಭೂಬಾಲನ್ ಟಿ ಅವರನ್ನು ಇ ಆಡಳಿತ ಇಲಾಖೆಯ ಇ ಆಡಳಿತ ಕೇಂದ್ರದ ಸಿಇಒ ಆಗಿ ವರ್ಗಾವಣೆ ಮಾಡಲಾಗಿದ್ದು, ಸುಶೀಲ ಬಿ ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹುದ್ದಗೆ ವರ್ಗಾಯಿಸಲಾಗಿದೆ.
ವಿಜಯನಗರ ಜಿಲ್ಲೆಗೆ ದಕ್ಷಿಣ ಕನ್ನಡ ಪಂಚಾಯತ್ ಸಿಇಒ ಆನಂದ್ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದ್ದು, ಅಟಲ್ ಜನಸ್ನೇಹಿ ಕೇಂದ್ರದ ಎಂಡಿ ಭೂಯಲ್ ಹರ್ಷ ನಾರಾಯಣ ರಾವ್ ಅವರನ್ನು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಉಳಿದ ಐಎಎಸ್ ಅಧಿಕಾರಿಗಳನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವಿವರ ಮುಂದಿದೆ
ಜಹೀರಾ ನಸೀಮ್ – ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು
ಪಂಡ್ವೆ ರಾಹುಲ್ ತುಕಾರಾಮ್ – ಕಲಬುರಗಿ ಪಬ್ಲಿಕ್ ಇನ್ಸ್ಟ್ರಕ್ಷನ್ ಹೆಚ್ಚುವರಿ ಆಯುಕ್ತ
ದಿಲೀಶ್ ಸಸಿ – ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ
ಈಶ್ವರ್ ಕುಮಾರ್ – ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ
ಶಿಶಿಧರ್ ಕುರೇರಾ – ಕೆಯುಐಡಿಎಫ್‌ಸಿ ಜಂಟಿ ವ್ಯವಸ್ಥಾಪಕ ನಿರ್ದೇಶಕ
ಡಾ. ಆಕಾಶ್ ಎಸ್ – ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ
ಅಪರ್ಣಾ ರಮೇಶ್ – ಇಡಿಸಿಎಸ್ ನಿರ್ದೇಶಕರು
ನರ್ವಾಡೆ ವಿನಾಯಕ್ ಕರ್ಬಾರಿ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ
ಯತೀಶ್ ಆರ್ – ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…