ಬೆಂಗಳೂರು.19.ಜನವರಿ.26: ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 310 ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅನೇಕ ವರ್ಷಗಳಿಂದ ಉನ್ನತ ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇಕಡ 60ರಷ್ಟು ಬೋಧಕರ ಕೊರತೆ ಇದೆ ಎಂದು ತಿಳಿಸಿದ್ದಾರೆ.
ಬೋಧಕರ ಕೊರತೆ ಇರುವ ಕಾರಣ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12,000, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಹೆಚ್ಚು ವಿವಿಗಳನ್ನು ಸ್ಥಾಪಿಸಿದ ಕಾರಣ ಅವುಗಳ ಸ್ಥಿತಿ ಶೋಚನೀಯವಾಗಿದೆ. ನಾವು ವಿದೇಶಿ ವಿವಿ ಮಾದರಿ ಅನುಸರಿಸಲು ಸಾಧ್ಯವಿಲ್ಲ. ವಿದೇಶಿ ವಿವಿಗಳು ವಿದ್ಯಾರ್ಥಿಗಳ ಸಂಗ್ರಹಿಸುವ ಶುಲ್ಕದಿಂದ ನಡೆಯುತ್ತವೆ. ಇಲ್ಲಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಬೇಕಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.






Any questions related to ಉನ್ನತ ಶಿಕ್ಷಣ ಇಲಾಖೆಯಲ್ಲಿ 60ರಷ್ಟು ಬೋಧಕರ ಕೊರತೆ.?