ಸರ್ವ ರೋಗಗಳಿಗೂ ಆಯುರ್ವೇದವೇ ಮದ್ದು-ಪೂಜ್ಯ ಡಾ. ಶಿವಕುಮಾರ ಸ್ವಾಮಿಗಳು
ಬೀದರ.01.ಮಾರ್ಚ.25:- ಮಾನವನ ದೇಹದಲ್ಲಿ ಅಡಗಿರುವ ಸರ್ವರೋಗಗಳಿಗೂ ಆಯುರ್ವೇದವೇ ಸಂಜೀವಿನಿಯಾಗಿ ಕಾಪಾಡುತ್ತದೆ. ಅದು ಶಾರಿರಿಕ ಸಧೃಢತೆಯ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡುತ್ತದೆ ಎಂದು ಶ್ರೀ ಸಿದ್ಧಾರೂಢ ಚಿದಂಬರ ಆಶ್ರಮದ ಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ನುಡಿದರು.
ಅವರು ಇಂದು ಕರ್ನಾಟಕ ಜೀವವೈವಿದ್ಯ ಮಂಡಳಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವೈದ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ 15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ ಜಾಥಾಗೆ ಎನ್.ಕೆ.ಜಾಬಶೆಟ್ಟಿ ಆಯುರ್ವೇದ ಕಾಲೇಜಿನಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಗ್ರಾಮದಲ್ಲಿ ಆಯುರ್ವೇದ ವೈದ್ಯ, ಒಬ್ಬ ಜ್ಯೋತಿಷಿ ಇದ್ದರೆ ಗ್ರಾಮಕ್ಕೆ ಕಳೆ, ಹೀಗಾಗಿ ಪಾರಂಪರಿಕವಾಗಿ ನಡೆದುಕೊಂಡು ಬಂದ ಆಯುರ್ವೇದಕ್ಕೆ ಜನರು ಹೆಚ್ಚು ಮಹತ್ವ ನೀಡಬೇಕು. ಇಂದಿನ ಕಾಲದಲ್ಲಿ ಈವತ್ತು ರೋಗ ಬಂದರೆ ನಾಳೆ ಕಡಿಮೆಯಾಗಿ ಓಡಾಡುವ ಸ್ಥಿತಿ ಬಂದಿದೆ. ಇದರಿಂದ ಅಡ್ಡ ಪರಿಣಾಮ ಹೆಚ್ಚಾಗಿ ಮನುಷ್ಯನ ಶರೀರ ರೋಗಗಳ ತಾಣವಾಗುತ್ತಿದೆ. ಜನರು ಆಯುರ್ವೇದಕ್ಕೆ ಮೊರೆ ಹೋಗಬೇಕೆಂದು ಸಲಹೆ ನೀಡಿದರು.
15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಸಂಯೋಜಕರಾದ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ, ಈ ವೈದ್ಯ ಸಮ್ಮೇಳನದ ಆಯೋಜನೆಗೆ ಬಹಳಷ್ಟು ಜನರು ಸಹಕಾರ ನೀಡಿದ್ದು, ಗುರುನಾನಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಬಲಬೀರಸಿಂಗ್ ಅವರು ತಮ್ಮ ಗುರುನಾನಕನಲ್ಲಿ ಸುಮಾರು 700 ಜನರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ನೀಡಿದ್ದು, ಡಾ. ಅಬ್ದುಲ್ ಖದೀರ್ ಅವರು ತಮ್ಮ ಕಾಲೇಜಿನಲ್ಲಿ ಸುಮಾರು 500ಕ್ಕೂ ಹೆಚ್ಚು ವೈದ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.
ಎಲ್ಲರೂ ಕೂಡಿ ವೈದ್ಯ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಪ್ರತಿಪಾದಿಸಿದರು.
ಇದೇ ವೇಳೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ ಡೊಳ್ಳು ಬಾರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು.
ಈ ಜಾಥಾದಲ್ಲಿ ಬೀದರ ಆಯುರ್ವೇದಿಕ್ ಕಾಲೇಜು, ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪಾರಂಪರಿಕ ವೈದ್ಯ ಪರಿಷತ್ತು, ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಜರಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈ.ಕ.ಶಿ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ ವಾಲಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎನ್.ಕೆ. ಜಾಬಶೆಟ್ಟಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಚಂದ್ರಕಾಂತ ಹಳ್ಳಿ, ಕರ್ನಾಟಕ ಫಾರ್ಮಸಿ ಕಾಲೇಜಿನ ಪ್ರಾಚಾರ್ಯರಾದ ಪೆÇ್ರ. ಕಾಶಿನಾಥ ನೌಬಾದೆ, ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ, ಗುರುನಾನಕ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶಾಮಲಾ ವಿ.ದತ್ತಾ, ದೇವಿದಾಸ ತುಮಕುಂಟೆ, ಪ್ರತಿಭಾ ಚಾಮಾ, ಪ್ರಭುಶೆಟ್ಟಿ ಮೂಲಗೆ, ಡಾ.ವಿದ್ಯಾ ಪಾಟೀಲ, ಡಾ. ಸಂಜೀವಕುಮಾರ ಜುಮ್ಮಾ, ಕಲ್ಯಾಣರಾವ ಚಳಕಾಪುರೆ, ಡಾ. ರಾಜಕುಮಾರ ಹೆಬ್ಬಾಳೆ, ಡಾ. ಸಂಜೀವಕುಮಾರ ತಾಂದಳೆ, ನಿಜಲಿಂಗಪ್ಪ ತಗಾರೆ, ಎಸ್.ಬಿ.ಕುಚಬಾಳ, ಡಾ.ಸುನಿತಾ ಕೂಡ್ಲಿಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…