ಬೆಂಗಳೂರು.05.ಏಪ್ರಿಲ್.25:- ರಾಜ್ಯ ಸರ್ಕಾರ ವತಿಯಿಂದ ಉಚಿತ ‘AI ಟ್ರೈನಿಂಗ್’ ” ಕೃತಕ ಬುದ್ಧಿಮತ್ತೆ” ತಂತ್ರಜ್ಞಾನವೀಗ ಭಾರತ ಸೇರಿ ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಮಾಹಿತಿ ತಂತ್ರಜ್ಞಾನ ಸೇರಿ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವವರು ಎಐ ಬಗ್ಗೆ ಜ್ಞಾನ, ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ .
ಉಚಿತವಾಗಿ ತರಬೇತಿ ನೀಡುವ ಜತೆಗೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ಕೂಡ ನೀಡುವುದಾಗಿ ಘೋಷಿಸಿದೆ.
ಹೌದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್ ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ಸೇರಿ ವಿವಿಧ ವೃತ್ತಿಪರ ತರಬೇತಿ ಕೋರ್ಸ್ಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಆಧುನಿಕ ತಂತ್ರಜ್ಞಾನದ ತರಬೇತಿಯನ್ನು ಉಚಿತವಾಗಿಯೇ ಪಡೆಯಬಹುದಾಗಿದೆ.
ಎಐ ಕುರಿತು ತರಬೇತಿ ನೀಡುವ ಅವಧಿಯಲ್ಲಿ 15 ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ….
ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಬನಶಂಕರಿ, ಬೆಂಗಳೂರು, ಈ ವಿಳಾಸಕ್ಕೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ 080- 26711096 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…