ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು.

ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಸರ್ಕಾರದಿಂದ ನೀಡುತ್ತಿರುವ ಮಾಸಾಶನ ₹800ರಿಂದ ₹2 ಸಾವಿರಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಂಗವಿಕಲರ ಅಭಿವೃದ್ಧಿಗಾಗಿ ಇರುವ ಎಲ್ಲ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಲು ಅಂಗವಿಕಲರ ಕೋಶ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಾಸಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು. ಬುದ್ಧಿಮಾಂದ್ಯರು ಸಾಕಷ್ಟು ಒತ್ತಡದಲ್ಲಿದ್ದಾರೆ. ವಿಶೇಷ ಶಾಲೆಯನ್ನು ಸ್ಥಾಪಿಸಲಾಗುವುದು. ಈಗಾಗಲೇ ಚಾಲ್ತಿಯಲ್ಲಿರುವ ಅಂಧ ಶಾಲೆಗಳಿಗೆ ಹೆಚ್ಚಿನ ಅನುದಾನ ಕೆಕೆಆರ್‌ಡಿಬಿಯಿಂದ ನೀಡಲು ಕ್ರಮ ಜರುಗಿಸಲಾಗುವುದು ಎಂದರು.

ಬಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಅವರ ವೇತನ ಹೆಚ್ಚಿಸಲಾಗುವುದು. 10ನೇ ತರಗತಿಯವರ ಶುಲ್ಕ ಮರು ಪಾವತಿ ಯೋಜನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ, ಪಿಯುಸಿ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟ್ಯಾಪ್‌, ಬ್ರೈಲ್‌ ಲಿಪಿಯ ಲ್ಯಾಪ್‌ಟ್ಯಾಪ್ ವಿತರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಂಗವಿಕಲರು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅಂಗವಿಕಲತೆ ಮೀರಿ ಬೆಳೆಯಲು ಪೂರಕ ವಾತಾವರಣ ನಿರ್ಮಿಸಬೇಕಿದೆ ಎಂದು ಹೇಳಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ವಿಶೇಷ ಚೇತನ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಅವರಿಗೆ ಪ್ರೋತ್ಸಾಹದ ಅಗತ್ಯವಿದೆ. ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಅಂಗವಿಕಲರಿಗೆ ಸಾಧನ ಸಲಕರಣೆ ಹಾಗೂ ತ್ರಿಚಕ್ರ ವಾಹನ ವಿತರಿಸಲಾಯಿತು. ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷ ಮುಹಮ್ಮದ್‌ ಗೌಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ ಎಂ., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಬಲೀಕರಣ ಅಧಿಕಾರಿ ರತ್ನ ಸುಭಾಷ, ವಿಕಲಚೇತನರ ಸಂಘ ಸಂಸ್ಥೆಗಳ ಅನೀಲಕುಮಾರ ಬೆಲ್ದಾರ ಮತ್ತಿತರರು ಹಾಜರಿದ್ದರು.

ಖಂಡ್ರೆದ್ವಯರಿಂದ ₹75 ಲಕ್ಷ’

ಎಲ್ಲ ಅಂಗವಿಕಲರಿಗೆ ಖುದ್ದಾಗಿ ಹೋಗಿ ಅರ್ಜಿ ಹಾಕಲು ಆಗುವುದಿಲ್ಲ. ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಸಾಶನ ಹಾಗೂ ಇತರೆ ಸೌಲಭ್ಯ ಕಲ್ಪಿಸಬೇಕು. ನನ್ನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ₹25 ಲಕ್ಷ ಹಾಗೂ ಸಂಸದ ಸಾಗರ ಖಂಡ್ರೆ ಅವರ ಅನುದಾನದಡಿ ₹50 ಲಕ್ಷದಲ್ಲಿ ಅಂಗವಿಕಲರಿಗೆ ವಿಶೇಷ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದರು.

Source Link ಪ್ರಜಾವಾಣಿ

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago