ಬೀದರ.30.ಮಾರ್ಚ.25:- ನೀರು ಜೀವ ಜಲ, ಆಹಾರ ಬೇಕಾದರೆ ಆಮದು ಮಾಡಿಕೊಳ್ಳಬಹುದು, ರಸ್ತೆ ವಿದ್ಯುತ್ ಇಲ್ಲದೆ ಇದ್ದರೆ ನಡೆಯುತ್ತದೆ ಆದರೆ ನೀರು ಇಲ್ಲದೆ ಇದ್ದರೆ ಬದುಕಲಿಕ್ಕೆ ಸಾಧ್ಯವಿಲ.್ಲ ಮುನುಷ್ಯನಿಗೆ ಗಾಳಿ ಎಷ್ಟು ಮುಖ್ಯವೋ ನೀರು ಸಹ ಅಷ್ಟೆ ಮುಖ್ಯ ಎಂದು ಅರಣ್ಯ ಪರಿಸರ ಹಾಗೂ ಜೀವಿಶಾಸ್ತç ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಹುಮನಾಬಾದ್ ನಗರದ ಥೇರ್ ಮೈದಾನದಲ್ಲಿ ಶನಿವಾರ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪುರಸಭೆ, ಕೇಂದ್ರ ಪುರಸ್ಕೃತ ಯೋಜನೆಯಡಿ ಹುಮನಾಬಾದ್, ಚಿಟಗುಪ್ಪ ಹಾಗೂ ಹಳ್ಳಿಖೇಡ (ಬಿ) ಇವರ ಸಂಯುಕ್ತಾಶ್ರದಲ್ಲಿ ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಹುಮನಾಬಾದ, ಚಿಟಗುಪ್ಪಾ, ಮತ್ತು ಹಳ್ಳಿಖೇಡ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ 1.60 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ ಹಾಗೂ ಜೆಸ್ಕಾಂ ವತಿಯಿಂದ ನಿಂಬೂರ ಗ್ರಾಮದಲ್ಲಿ 8.5 ಕೋಟಿ ವೇಚ್ಚದ 33/11 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೇರವೆರಿಸಿ ಮಾತನಾಡಿದರು.
ನಗರಗಳು ನವೀಕರಣಗೊಳ್ಳುತ್ತಿವೆ ಜನರು ಅನೇಕ ಕಾರಣಗಳಿಂದ ಹಳ್ಳಿ ಕಡೆಯಿಂದ ನಗರದ ಕಡೆಗೆ ವಲಸೆ ಬರುತ್ತಿದ್ದಾರೆ. ಉದ್ಯೋಗ, ಮಕ್ಕಳ ಶಿಕ್ಷಣಕ್ಕಾಗಿ ಆರೋಗ್ಯದ ಸಮಸ್ಯಗಳಿಗೆ ಬರುತ್ತಾರೆ. ಇದರಿಂದ ನಗರ ಪ್ರದೇಶದಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಅಧಿಕೃತವಾಗಿ ಅನಧಿಕೃತವಾಗಿ ಬಡವಾಣೆಗಳು ನಿರ್ಮಾಣವಾಗುತ್ತಿವೆ. ಆ ಬಡಾವಣೆಗೆ ಕುಡಿಯುವ ನೀರು, ವಿದ್ಯುತ್ ದೀಪ , ಚರಂಡಿ ವ್ಯವಸ್ಥೆ ಬೇಕು. ಬೇಸಿಗೆಯಲ್ಲಿ ಭಾವಿಗಳು ಹಾಗೂ ಬೋರವೇಲ್‌ಗಳು ಬತ್ತಿ ಹೋಗಿ ನೀರಿಗೆ ಹಾಹಾಕಾರ ಉಂಟಾಗುವ ನಿಟ್ಟಿನಲ್ಲಿ ಬೀದರ ಜಿಲ್ಲೆಯ ಭಾಲ್ಕಿ, ಹುಮನಾಬಾದ, ಚಿಟಗುಪ್ಪಾ, ಹಳ್ಳಿಖೇಡ ಪಟ್ಟಣಗಳಿಗೆ ಕುಡಿಯುವ ನೀರು ಕಾರಂಜಾ ಜಲಾಶಯದಿಂದ ನೀರು ಸರಬರಾಜು ಆಗುತ್ತಿದೆ. ಹಾಗೂ 28 ಸಾವಿರ ಹೆಕ್ಟರ್ ಭೂಮಿಗೆ ನೀರುಣಿಸಲು ಸಹಕಾರಿಯಾಗಿದೆ. 1500 ಸಾವಿರ ಕೋಟಿ ಅನುದಾನದಲ್ಲಿ ಜಲ ಜೀವನ ಮಿಷನ್ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಿ 800 ಜನ ವಸತಿ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಕೆಲಸ ಮಾಡುತ್ತಿದ್ದೇವೆ.ಇದಕ್ಕೆ ಮೂಲ ಕಾರಂಜಾ ಜಲಾಶಯ ಎಂದರು.
ಹುಮನಾಬಾದ ಜನಸಂಖ್ಯೆ 55 ಸಾವಿರ ಇದೆ. ಚಿಟಗುಪ್ಪಾ , ಹಳ್ಳಿಖೇಡ ಸೇರಿದರೆ 1 ರಿಂದ 1.2 ಲಕ್ಷ ಜನಸಂಖ್ಯೆ ಕುಡಿಯುವ ನೀರು ಶಾಶ್ವತವಾಗಿ ಕೊಡಬೇಕು ಎಂದು ಮುಂದಾಲೋಚನೆ ಮಾಡಿ. 33ಎಂಎಲ್‌ಡಿ ವರೆಗೆ ಈ ಯೋಜನೆ ತಯ್ಯಾರಿಸಲಾಗಿದೆ ಎಂದರು. ಇದರಿಂದ ಪ್ರತಿಯೊಬ್ಬರಿಗೆ 100 ಲೀಟರ್ ನೀರು ಪ್ರತಿದಿನ ಸಿಗುತ್ತದೆ. ನೀರು ಸೋರಿಕೆಯಾಗದಂತೆ ಸರಬರಾಜು ಮಾಡಬೇಕು. ಬೀದರ್ ಜಿಲ್ಲೆಯ ಸರ್ವತೋಮು ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು. ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿಂಬುರ ಗ್ರಾಮದಲ್ಲಿ 8.5 ಕೋಟಿ ವೆಚ್ಚದಲ್ಲಿ 33/11ಕೆವಿ ವಿದ್ಯುತ್ ಕೇಂದ್ರ ಸ್ಥಾಪಿಸಿ ಎಲ್ಲಾ ರೈತರಿಗೆ ಗುಣಮಟ್ಟದ ವಿದ್ಯುತ್ ಸಿಗುವಂತೆ ಮಾಡಲಾಗಿದೆ ಎಂದು ಹೇಳಿದರು.
ಪೌರಾಡಳಿ ಹಾಗೂ ಹಜ್ ಖಾತೆ ಸಚಿವರಾದ ರಹೀಮ್ ಖಾನ್ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಹುಮನಾಬಾದ್ ಹಾಗೂ ಭಾಲ್ಕಿ ಐತಿಹಾಸಿಕ ಪ್ರಸಿದ್ಧಿ ಪಡೆದ ತಾಲೂಕ ಕೇಂದ್ರಗಳಾಗಿವೆ. ಹೀಗಾಗಿ ಶಾಸಕ ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್ ಅವರ ಮನವಿಯಂತೆ ಹುಮನಾಬಾದ್, ಭಾಲ್ಕಿ ನಗರಸಭೆ ಹಾಗೂ ಮನ್ನಾಖೇಳಿ, ಕಮಠಾಣ, ರಾಜೇಶ್ವರ ಗ್ರಾಮಗಳು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಹುಮನಾಬಾದ ಶಾಕಸಕರಾದ ಡಾ. ಸಿದ್ದಲಿಂಗ ಪಾಟೀಲ್ ಮಾತನಾಡಿ, ಈ ಹಿಂದೆ ಮಿರಾಜೋದ್ಧಿನ್ ಪಟೇಲ್ ಶಾಸಕರಾಗಿದ್ದ ಸಂದರ್ಭದಲ್ಲಿ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ನಾನು ಶಾಸಕನಾದ ಮೇಲೆ ಜನರ ನಿರೀಕ್ಷೆಗೆ ತಕ್ಕಂತೆ ಬಹುದೊಡ್ಡ ಯೋಜನೆಗೆ ಚಾಲನೆ ನೀಡುತ್ತಿರುವುದು ಇದು ನನ್ನ ಪಾಲಿನ ಸೌಭಾಗ್ಯವಾಗಿದೆ. ಹಳ್ಳಿಖೇಡ (ಬಿ) ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮಂಜೂರು ಮಾಡಿಕೊಡಬೇಕು. ಚಿಟಗುಪ್ಪ ತಾಲ್ಲೂಕ ಕೇಂದ್ರದಲ್ಲಿ ಸರಕಾರದ ಎಲ್ಲ ಇಲಾಖೆ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಮಾತನಾಡಿ, ಹುಮನಾಬಾದ್ ಮತ್ತು ಚಿಟಗುಪ್ಪ ವ್ಯಾಪ್ತಿಯ ಒಟ್ಟು 3 ಪುರಸಭೆ ಪಟ್ಟಣಗಳ ಜನರ ಅನುಕೂಲಕ್ಕಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರ ಅವಧಿಯಲ್ಲಿ ನೀರು ಸರಬರಾಜು ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದು ವಿಳಂಬವಾಗಿ ಪ್ರಸ್ತುತ ಸಾಲಿನಲ್ಲಿ ಶಂಕು ಸ್ಥಾಪನೆ ಮಾಡಲಾಗುತ್ತಿದೆ. ಜನರ ಕಲ್ಯಾಣಕ್ಕಾಗಿ ರಾಜೇಶ್ವರ, ಕಮಠಾಣ ಹಾಗೂ ಮನ್ನಾಖೇಳಿ ಪಟ್ಟಣ ಪಂಚಾಯಿತಿ ಜತೆಗೆ ಹುಮನಾಬಾದ್ ಭಾಲ್ಕಿ ನಗರ ಸಭೆಗಳಾಗಿ ಮೇಲ್ದೇರ್ಜೆಗೆರಿಸಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ,ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಯಕ ಕಾರ್ಯಪಾಲಕ ಅಭಿಯಂತರ ರವೀಂದ್ರ ಗಣಗೊಂಡ, ಹುಮನಾಬಾದ, ಚಿಟಗುಪ್ಪಾ, ಹಳ್ಳಿಖೇಡ್ ಪುರಸಭೆ ಮುಖ್ಯ ಅಧಿಕಾರಿಗಳು, ತಹಸೀಲ್ದಾರ್ ಅಂಜುಮ್ ತಬಸುಮ್, ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯರ್ ಸೇರಿದಂತೆ ಪುರಸಭೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…