ಭವ್ಯ ಭಾರತದ ಅಭಿವೃದ್ಧಿಯ ಜನಕ ಅಂಬೇಡ್ಕರ ಅವರು-ಡಾ.ಗಿರೀಶ ಬದೋಲೆ


ಬೀದರ,06 ಡಿಸೆಂಬರ್24:- ಬೀದರ:-ಭವ್ಯ ಭಾರತದಲ್ಲಿ ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಹಕ್ಕುಗಳು, ಕರ್ತವ್ಯಗಳು, ಸಮಾನತೆ, ಭಾವೈಕ್ಯತೆ ಭ್ರಾತೃತ್ವ ನೀಡಿ ಅಸ್ಪೃಶ್ಯತೆ ನಿವಾರಣೆಗೆ ಪರಿಶ್ರಮ ಪಟ್ಟ ಅಂಬೇಡ್ಕರ್ ಅವರು ಮಹಾಮಾನವತಾವಾದಿ ಹಾಗೂ ಭವ್ಯ ಭಾರತದ ಅಭಿವೃದ್ಧಿಯ ಜನಕರಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಹೇಳಿದರು.


ಅವರು ಇಂದು ನಗರದ ಅಂಬೇಡ್ಕರ್ ವೃತದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಪಂಚಶೀಲ ಧ್ವಜಾರೋಹಣ ನೆರೆವೆರಿಸಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಮಾತನಾಡಿ, ಭಾರತೀಯರಾದ ಪ್ರತಿಯೊಬ್ಬರೂ ಡಾ.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಪ್ರೀತಿ, ವಿಶ್ವಾಸ ಭಾವೈಕ್ಯತೆ ಮತ್ತು ಶಾಂತಿ ಕಾಪಾಡಿಕೊಂಡು ಅಂಬೇಡ್ಕರ್ ರವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದು ತಿಳಿಸಿದರು
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ಭಾರತದ ಪ್ರತಿಯೊಬ್ಬ ನಾಗರಿಕರನ್ನು ಅಂಬೇಡ್ಕರ್ ರವರ ಋಣದಲ್ಲಿ ಜೀವನ ಸಾಗಿಸುತ್ತಿದ್ದಾನೆ.

ಅಂಬೇಡ್ಕರ್ ಅವರು ಜ್ಞಾನದ ಶಿಖರವಾಗಿದ್ದಾರೆ ಎಂದರು.


ಮಾಜಿ ಸಚಿವ ಬಂಡೆಪ್ಪಾ ಖಾಶೆಂಪೂರ ಮಾತನಾಡಿ, ಪ್ರಜಾಪ್ರಭುತ್ವದ ರೂವಾರಿ ಬಾಬಾಸಾಹೇಬ್ ಅಂಬೇಡ್ಕರ್ ಅವರಾಗಿದ್ದಾರೆ. ಅವರು ನೀಡಿದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದರು
ನಗರ ಸಭೆ ಅಧ್ಯಕ್ಷ ಮಹಮ್ಮದ್ ಗೌಸ್ ಮಾತನಾಡಿ, ಅಂಬೇಡ್ಕರ್ ಸಾಹೇಬರು ನೀಡಿದ ಮೀಸಲಾತಿಯ ಭಿಕ್ಷೆಯಿಂದ ನಾನು ನಗರ ಸಭೆಯ ಅಧ್ಯಕ್ಷನಾಗಲು ಸಾಧ್ಯವಾಗಿದೆ ಎಂದರು
ಇದೇ ಸಂದರ್ಭದಲ್ಲಿ ಪೂಜ್ಯ ಭಂತೆ ಜ್ಞಾನ ಸಾಗರ ಹಾಗೂ ಭಿಕ್ಕು ಸಂಘ ತ್ರೀಶರಣ ಪಂಚಶೀಲ ನಡೆಸಿಕೊಟ್ಟರು. ಎಲ್ಲಾ ಗಣ್ಯರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಸಮಿತಿಯ ಅಧ್ಯಕ್ಷ ಮಾರುತಿ ಬೌಧ್ದೆ, ಗೌರವಾಧ್ಯಕ್ಷ ವಿಷ್ಣುವರ್ಧನ್ ವಾಲ್ದೋಡ್ಡಿ, ಕಾರ್ಯಾಧ್ಯಕ್ಷ ಪವನ ಮಿಠಾರೆ, ಪ್ರಧಾನ ಕಾರ್ಯದರ್ಶಿ ಮಹೇಶ ಗೋರನಾಳಕರ್, ಕಾರ್ಯದರ್ಶಿ ರಾಹುಲ್ ಡಾಂಗೆ ಖಜಾಂಚಿ ವಿನೋದ ಬಂದಗೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೆಚ್. ಎಸ್ .ಸಿಂಧೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರೇಮಸಾಗರ ದಾಂಡೆಕರ್, ನಗರ ಸಭೆ ಪೌರಾಯುಕ್ತ ಶಿವರಾಜ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸುಭಾಷ ನಾಗೂರೆ, ಪ್ರಮುಖರಾದ ರಾಜಕುಮಾರ ಮೂಲಭಾರತಿ, ಬಸವರಾಜ ಮೇತ್ರೆ, ಪ್ರಶಾಂತ ದೋಡ್ಡಿ, ಸಂಗು ಚಿದ್ರಿ ಸುನೀಲ್ ಡೊಳೆ, ಸುರೇಶ ಶಿಂದೆ, ಸುಮಂತ ಕಟ್ಟಿಮನಿ, ಅರುಣ ಪಟೇಲ್, ಓಂಪ್ರಕಾಶ್ ರೋಟ್ಟೆ, ಬಸವರಾಜ ಪವಾರ, ರಾಜಕುಮಾರ ಕಾಂಬಳೆ, ಅಭಿ ಕಾಳೆ, ಪ್ರದೀಪ್ ಜಂಜಿರೆ, ಮುಕೇಶ್ ರಾಯ್ ಬಾಬುರಾವ ಮಿಠಾರೆ,ರಾಹುಲ್ ಹಾಲೆಪೂರ್ಗಿಕರ್, ಶ್ರೀಮಂತ ಜೋಷಿ, ರವಿ ಭೂಸಂಡೆ, ವಿನೊದ ಗುಪ್ತಾ, ವಿನಿತ ಗಿರಿ, ಅಜಯ ದೀನೆ ಪಪ್ಪು ಹಾರೂರಗೇರಿ, ಕರಣ ಜಡಗೆ, ದೀಪಕ್ ದಿಲ್ಲೆ, ಸೋನು ವಾಲ್ದೋಡ್ಡಿ, ಜಗದೀಶ್ ಬಿರಾದರ, ಉದಯ ನಾಯಕ, ಅಮೃತ ಮುತಂಗಿಕರ್, ಸಂತೋಷ ಏಣಕೂರೆ, ಡಾ.ಮದನಾ ವೈಜಿನಾಥ, ಸುಧ್ದಾಮಣಿ ಗುಪ್ತಾ, ಬೌಧ್ದ ಉಪಾಸಕ ಉಪಾಸಕಿಯರು ವಿವಿಧ ಸಮಾಜ ಗಣ್ಯರು , ಹೋರಾಟಗಾರು ಸಂಘಟನೆಗಳ ಮುಖ್ಯಸ್ಥರು ಅಧಿಕಾರಿ ವರ್ಗದವರು ವಿಧ್ಯಾರ್ಥಿ ವಿಧ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Source:www.prajaprabhat.com

prajaprabhat

Recent Posts

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

37 minutes ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

42 minutes ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

58 minutes ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

13 hours ago