Facebook
X
WhatsApp
Telegram

ನವದೆಹಲಿ: ಹೊಸ ಕ್ಯಾಬಿನೆಟ್ ರಚನೆಗೆ ತೀವ್ರ ಪೈಪೋಟಿ ನಡೀತಿದೆ ತಿಂಗಳುಗಳಿಂದ ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಅಂತಿಮ ಮುದ್ರೆ ಬೀಳುವ ಸಮಯ ಹತ್ತಿರವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿದೇಶಿ ಪ್ರವಾಸ ಮುಗಿಸಿ ದೆಹಲಿಗೆ ವಾಪಸಾಗುತ್ತಿರುವುದರಿಂದ, ಮುಂದಿನ ಐದು ದಿನಗಳಲ್ಲಿ ನೂತನ ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವ ಕಾಣುಬರುತಿದೆ.

ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಮತ್ತು ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಲು ಹೈಕಮಾಂಡ್ ಹಂತದಲ್ಲಿ ಭರಪೂರ ಚಟುವಟಿಕೆಗಳು ಪ್ರಾರಂಭ ವಾಗಿದೆ.

ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಎರಡನೇ ಪಟ್ಟಿ ಸಿದ್ಧ
ಶಾಸಕರ ಎರಡನೇ ಪಟ್ಟಿ ಸಿದ್ಧ: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂಪುಟ ಆಕಾಂಕ್ಷಿ ಶಾಸಕರ ಎರಡನೇ ಹಂತದ ಪಟ್ಟಿಯೊಂದಿಗೆ ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದಾರೆ.

ಸಾಮಾಜಿಕ ಸಮತೋಲನಕ್ಕೆ ಆದ್ಯತೆ: ಹಿರಿಯ ಶಾಸಕರು, ಯುವ ನಾಯಕರು ಹಾಗೂ ಪ್ರಾದೇಶಿಕ ಮತ್ತು ಜಾತಿ ಆಧಾರಿತ ಸಮತೋಲನವನ್ನು ಕಾಯ್ದುಕೊಳ್ಳಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದಾರೆ.

ಹೈಕಮಾಂಡ್‌ನ ಅಂತಿಮ ನಿರ್ಧಾರ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆಯಲಿರುವ ಸಭೆಯಲ್ಲಿ ಪಟ್ಟಿ ಅಂತಿಮಗೊಳಿಸಲಾಗುವುದು.

ಸಂಪುಟ ಸೇರ್ಪಡೆಗಾಗಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಶಾಸಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸಚಿವ ಸ್ಥಾನದ ರೇಸ್‌ನಲ್ಲಿರುವ ಹಲವು ಪ್ರಮುಖ ಶಾಸಕರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ತಮ್ಮ ಆಪ್ತ ನಾಯಕರ ಮೂಲಕ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಯತ್ನಿಸುತ್ತಿದ್ದಾರೆ. ಹೈಕಮಾಂಡ್ ಹಸಿರು ನಿಶಾನೆ ತೋರಿದರೆ ಮುಂದಿನ ವಾರವೇ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology