Home » ಲೈವ್ ನ್ಯೂಸ್ » 19 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ!

19 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ!

ಬೆಂಗಳೂರು.01.ಸೆಪ್ಟೆಂಬರ.26:ರಾಜ್ಯ ಸರ್ಕಾರ ಭರ್ಜರಿ ಸಹಿ ಸುದ್ಧಿ ನೀಡುತ್ತಿದೆ ಶಿಕ್ಷಕ ಆಗುವ ಆಕಾಂಸಿಗಳಿಗೆ 72 ಸಾವಿರಕ್ಕೂ ಹೆಚ್ಚು ವಿವಿಧ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದ್ದು, ಶಿಕ್ಷಣ ಇಲಾಖೆಯಲ್ಲಿಯೇ ಸುಮಾರು 18ರಿಂದ 19 ಸಾವಿರ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಬೆಂಗಳೂರಿನ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಗ್ರಂಥಪಾಲಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಸರ್ಕಾರವು 72 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಂಡಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

19 ಸಾವಿರ ಖಾಲಿ ಹುದ್ದೆಗಳ ಭರ್ತಿ ಮಾಡೋಕೆ ಸರ್ಕಾರ ಮುಂದಾಗಿದೆ.

ಇದಲ್ಲದೆ, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲಾಗಿದೆ. ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳ ಭರ್ತಿ ಆಗಲಿದೆ ಎಂದು ಸಚಿವರು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಮುಖ್ಯ ಗ್ರಂಥಪಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

Author

ಪ್ರಮುಖ ಸುದ್ದಿ

Stock market

Astrology