ಬೆಂಗಳೂರು.05.ಸೆಪ್ಟೆಂಬರ್.26:2026-27ನೇ ಸಾಲಿನಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ಆರಂಭಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಇದನ್ನು 9ರಿಂದ 12ನೇ ತರಗತಿವರೆಗೆ ವಿಸ್ತರಿಸಲಾಗುವುದು. ಅದೇ ರೀತಿ, 2026-27ನೇ ಸಾಲಿನಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯ ಶಿಕ್ಷಕರು ಇರಬೇಕು ಎಂಬುದು ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.






Any questions related to AI ಆಧಾರಿತ ಕಲಿಕೆ 9ರಿಂದ 12ನೇ ತರಗತಿಗೂ ವಿಸ್ತರಣೆ:?