2 ದಶಕದಿಂದಲೂ ನಡೆಯದ ನೇಮಕಾತಿ ಕಾಯಂ ಉಪನ್ಯಾಸಕರಗಿಂತ ಅತಿಥಿ’ಉಪನ್ಯಾಸಕರಗಳೇ ಜಾಸ್ತಿ!

ಮೈಸೂರು.06.ಫೆ.25.:- ರಾಜ್ಯದ ಪ್ರತೆಕ್ ವಿಶ್ವವಿದ್ಯಾಲಯದಲ್ಲಿ ದಶಕದಿಂದಲೂ ಕಾಯಂ ಉಪನ್ಯಕ್ಕರಿಗಿಂತ ‘ಅತಿಥಿ ಉಪನ್ಯಾಸಕಗಳೇ ಜಾಸ್ತಿ. ರಾಜ್ಯ ಸರಕಾರಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಸ್ಥಾಪಿತವಾದ ‘ಮೈಸೂರು ವಿಶ್ವವಿದ್ಯಾಲಯ’ದಲ್ಲಿ ಕಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರ ಮೇಲಿನ ‘ಅವಲಂಬನೆ’ಯೇ ಜಾಸ್ತಿಯಾಗುತ್ತಿದೆ.ಬೋಧಕ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯು ಕಾಲಕಾಲಕ್ಕೆ ನಡೆಯದೇ ಇರುವುದು ಇದಕ್ಕೆ ಕಾರಣವಾಗಿದೆ.

ರಾಜ್ಯದಲ್ಲೇ ಮೊದಲನೆಯದು ಎಂಬ ಹೆಗ್ಗಳಿಕೆ ಜತೆಗೆ ಶತಮಾನದ ಇತಿಹಾಸವನ್ನೂ ಹೊಂದಿರುವ ಈ ವಿಶ್ವವಿದ್ಯಾಲಯದಲ್ಲಿ ನಿವೃತ್ತಿ ಅಥವಾ ವಿವಿಧ ಕಾರಣದಿಂದ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸವೂ ನಡೆಯುತ್ತಿಲ್ಲ.

ಇಲ್ಲಿಗೆ 664 ಬೋಧಕರ ಕಾಯಂ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 238 ಮಂದಿ ಮಾತ್ರ ಇದ್ದಾರೆ. ಬರೋಬ್ಬರಿ 426 ಹುದ್ದೆಗಳು ಖಾಲಿ ಇವೆ. ಇದನ್ನು ಸರಿದೂಗಿಸಲು ತುಸು ಹೆಚ್ಚಿನ ಪ್ರಮಾಣದಲ್ಲೇ ಅಂದರೆ ಸ್ನಾತಕ ವಿಭಾಗದಲ್ಲಿ 375 ಹಾಗೂ ಸ್ನಾತಕೋತ್ತರದಲ್ಲಿ 425 ಸೇರಿದಂತೆ ಒಟ್ಟು 800 ಮಂದಿ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ.

ಇದೇ ವರ್ಷದ ಏಪ್ರಿಲ್‌-ಮೇ ವೇಳೆಗೆ ಇನ್ನಷ್ಟು ಮಂದಿ ಅನುಭವಿಗಳು ನಿವೃತ್ತರಾಗಲಿದ್ದು, ಆಗ ಖಾಲಿ ಹುದ್ದೆಗಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಗಲಿದೆ! ಇದು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.

ದಶಕದಿಂದಲೂ ಕಾಯಂ ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ. ಈ ಕಾರಣದಿಂದ ಅತಿಥಿ ಉಪನ್ಯಾಸಕರ ಮೇಲೆ ‘ಅವಲಂಬನೆ’ ಜಾಸ್ತಿಯಾಗಿದೆ. ಮುಂದಿನ ವರ್ಷಗಳಲ್ಲಿ ಎಲ್ಲಾ ವಿಭಾಗಗಳಲ್ಲೂ ಕಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರೇ ಹೆಚ್ಚಿರುವ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆ ಇದೆ. ಇದು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯ ಮೇಲೆ ‘ಪರಿಣಾಮ’ ಬೀರುವ ಆತಂಕ ಶೈಕ್ಷಣಿಕ ವಲಯದವರದ್ದಾಗಿದೆ.

‘ನಮ್ಮ ವಿಶ್ವವಿದ್ಯಾಲಯದಲ್ಲಿ ಮಂಜೂರಾದ ಕಾಯಂ ಬೋಧಕರ ಹುದ್ದೆಗಳಿಗಿಂತಲೂ ಖಾಲಿ ಇರುವ ಹುದ್ದೆಗಳ ಪ್ರಮಾಣವೇ ಜಾಸ್ತಿ ಇರುವುದು ನಿಜ. ಸರಾಸರಿ ಶೇ 70ಕ್ಕೂ ಜಾಸ್ತಿ ಖಾಲಿ ಇವೆ. ಭರ್ತಿ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅದೀಗ, ಆರ್ಥಿಕ ಇಲಾಖೆಯ ಹಂತದಲ್ಲಿದೆ. ತುರ್ತಾಗಿ ಮೊದಲನೇ ಹಂತದಲ್ಲಿ 70 ಬ್ಯಾಕ್‌ಲಾಗ್ ಹುದ್ದೆಗಳನ್ನಾದರೂ ತುಂಬುವಂತೆ ಕೋರಲಾಗಿದೆ’ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್‌ ತಿಳಿಸಿದರು.

ಮುಚ್ಚದಂತೆ ನೋಡಿಕೊಳ್ಳಲಾಗಿದೆ: ‘ನೆರೆಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವಿ.ವಿಯು ಆರಂಭವಾಗಿರುವುದರಿಂದಾಗಿ ಪ್ರಸ್ತುತ ನಮ್ಮ ವಿ.ವಿಯು ಮೈಸೂರಿಗೆ ಮಾತ್ರವೇ ಸೀಮಿತವಾಗಿದೆ. ಆದರೂ ಇಲ್ಲಿಗೆ ವ್ಯಾಸಂಗಕ್ಕೆ ವಿದ್ಯಾರ್ಥಿಗಳು ಬರುವುದು ಸಂಪೂರ್ಣ ನಿಂತು ಹೋಗುತ್ತದೆ ಎನ್ನಲಾಗದು. ಆದರೆ, ಇನ್ನೆರಡು ವರ್ಷ ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳು ನಮ್ಮ ಘಟಿಕೋತ್ಸವದಲ್ಲೇ ಪದವಿ ಪಡೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಯಾವ ವಿಭಾಗವೂ ಮುಚ್ಚದಂತೆ ನೋಡಿಕೊಳ್ಳಲಾಗಿದೆ’ ಎನ್ನುತ್ತಾರೆ ಅವರು.

‘ವಿ.ವಿಯಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚಾಗಬೇಕಾದರೆ ಕಾಯಂ ಬೋಧಕ ವರ್ಗದ ಬಲದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಹಕರಿಸಿದರೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

ಪ್ರೊ.ಎನ್‌.ಕೆ. ಲೋಕನಾಥ್ ಪ್ರೊ.ಎನ್.ಕೆ. ಲೋಕನಾಥ್ ಕುಲಪತಿ ಮೈಸೂರು ವಿಶ್ವವಿದ್ಯಾಲಯತರಗತಿಗಳನ್ನು ಅತಿಥಿ ಉಪನ್ಯಾಸಕರ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಕಾಯಂ ಬೋಧಕರ ಹುದ್ದೆ ಭರ್ತಿ ಮಾಡಿಕೊಡುವ ಮೂಲಕ ಉನ್ನತ ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಪ್ರೋತ್ಸಾಹ ಕೊಡಬೇಕು

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

6 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

11 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

12 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

13 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

13 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

13 hours ago